ವಿಜಯಸಾಕ್ಷಿ ಸುದ್ದಿ, ಶಿರಹಟ್ಟಿ: ತಾಯಿಯ ಋಣ ತೀರಿಸಲು ಯಾರಿಂದಲೂ ಸಾಧ್ಯವಿಲ್ಲ. ಪ್ರತಿಯೊಬ್ಬರೂ ಅಮ್ಮನ ಹೆಸರಿನಲ್ಲಿ ಸಸಿ ನೆಟ್ಟು ಬೆಳೆಸಿ ಪ್ರಕೃತಿಗೆ ಕೊಡುಗೆ ನೀಡಬೇಕು ಎಂದು ಶಿರಹಟ್ಟಿ ಶಾಸಕರಾದ ಡಾ. ಚಂದ್ರು ಲಮಾಣಿ ಹೇಳಿದರು.
ಶಿರಹಟ್ಟಿ ತಾಲೂಕಿನ ಕಡಕೋಳ ಗ್ರಾಮದ ಬಸವ ಯೋಗ ಕೇಂದ್ರ ಆವರಣದಲ್ಲಿ ಮೇರಾ ಯುವ ಭಾರತ ಸಹಯೋಗದೊಂದಿಗೆ ಆಯೋಜಿಸಿದ್ದ ‘ತಾಯಿಯ ಹೆಸರಿನಲ್ಲಿ ಒಂದು ವೃಕ್ಷ ಅಭಿಯಾನ’ ಕಾರ್ಯಕ್ರಮದಲ್ಲಿ ಮಾತನಾಡಿ, ಪ್ರತಿಯೊಬ್ಬರೂ ತಾಯಿ ನೆನಪಿನಲ್ಲಿ ಒಂದು ಗಿಡ ನೆಟ್ಟು ಬೆಳೆಸಬೇಕು ಎಂದು ತಿಳಿಸಿದರು.
ತಾ.ಪಂ ಮಾಜಿ ಸದಸ್ಯ ತಿಪ್ಪಣ್ಣ ಕೊಂಚಿಗೇರಿ ಮಾತನಾಡಿ, ನಗರೀಕರಣದ ಹೆಸರಿನಲ್ಲಿ ಕಾಂಕ್ರೀಟ್ ಕಾಡು ಹೆಚ್ಚಾಗುತ್ತಿದೆ. ಪ್ರಸ್ತುತ ಪರಿಸರ ಉಳಿಸಿ, ಬೆಳೆಸಿ ಮುಂದಿನ ಪೀಳಿಗೆಗೆ ಕಾಪಾಡಿಕೊಂಡು ಹೋಗಬೇಕಾದ ಅನಿವಾರ್ಯತೆ ಇದೆ. ಪ್ರತಿಯೊಬ್ಬರೂ ಗಿಡ ಬೆಳೆಸಿ ಪರಿಸರ ಉಳಿಸಬೇಕು ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ರವಿ ಹೊಂಬಾಳೆ, ಅರುಣ್ ಬಾರಕೇರ, ಮಂಜುನಾಥ ಹರಲಾಪುರ, ಹನುಮಂತ ಹುಲ್ಲೂರು, ಶರಣು ಕೊಂಚಿಗೇರಿ, ಕಿರಣ ಹರ್ಲಾಪುರ, ವಿಶ್ವನಾಥ್ ಉಳ್ಳಾಗಡ್ಡಿ ಮುಂತಾದವರಿದ್ದರು.