ಡಿಕೆಶಿಗೆ ಹೆಚ್ಚು ಶಾಸಕರ ಬೆಂಬಲ ಇಲ್ಲ, 5 ವರ್ಷ ನಾನೇ ಸಿಎಂ: ಸಿದ್ದರಾಮಯ್ಯ

0
Spread the love

ನವದೆಹಲಿ: ಕರ್ನಾಟಕ ಕಾಂಗ್ರೆಸ್‌ನಲ್ಲಿ ಅಧಿಕಾರ ಹಂಚಿಕೆ ಕುರಿತು ತೀವ್ರ ಚರ್ಚೆ ನಡೆಯುತ್ತಿರುವ ಸಂದರ್ಭದಲ್ಲೇ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್ ದೆಹಲಿಯಲ್ಲಿ ಹೈಕಮಾಂಡ್‌ನೊಂದಿಗೆ ಚರ್ಚೆ ನಡೆಸಲು ಸಮಯ ನಿಗದಿ ಆಗಿದೆ. ಇದರ ನಡುವೆ ಮುಂದಿನ ಐದು ವರ್ಷಗಳ ಕಾಲ ನಾನೇ ಮುಖ್ಯಮಂತ್ರಿಯಾಗಿ ಮುಂದುವರಿಯುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

Advertisement

ರಾಷ್ಟ್ರೀಯ ಸುದ್ದಿ ವಾಹಿನಿಯೊಂದರ ಸಂದರ್ಶನದಲ್ಲಿ ಮಾತನಾಡಿದ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಕೂಡ ನಮ್ಮ ಜತೆಗಿದ್ದಾರೆ. ಮೊನ್ನೆ ನಡೆದ ಸಚಿವ ಸಂಪುಟ ಸಭೆಯಲ್ಲೂ ನಮ್ಮ ಜತೆಗಿದ್ದರು. ಕೆಲವು ಶಾಸಕರು ಡಿಕೆ ಶಿವಕುಮಾರ್ ಸಿಎಂ ಆಗಬೇಕೆಂಬ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಆದರೆ, ಎಲ್ಲರೂ ಮುಖ್ಯಮಂತ್ರಿಯಾಗಲು ಸಾಧ್ಯವಿಲ್ಲ. ನಾನೇ ಐದು ವರ್ಷ ಮುಖ್ಯಮಂತ್ರಿಯಾಗಿ ಆಡಳಿತ ಮಾಡುತ್ತೇನೆ ಎಂದು ಸ್ಪಷ್ಟವಾಗಿ ಹೇಳುತ್ತಿದ್ದೇನೆ ಎಂದರು.

ಡಿಕೆ ಶಿವಕುಮಾರ್ ಕೂಡ ಸಿಎಂ ಹುದ್ದೆ ಆಕಾಂಕ್ಷಿ ಹೌದು. ಆದರೆ ನಾನೇ 5 ವರ್ಷ ಅಧಿಕಾರ ಪೂರೈಸುವೆ. ಸಿಎಂ ಕುರ್ಚಿ ಖಾಲಿ ಇಲ್ಲ ಎಂದು ಡಿಕೆ ಶಿವಕುಮಾರ್ ಅವರೇ ಸ್ಪಷ್ಟಪಡಿಸಿದ್ದಾರೆ. ನಮ್ಮದು ಹೈಕಮಾಂಡ್ ನಿರ್ದೇಶನದ ಅನುಸಾರ ಕಾರ್ಯನಿರ್ವಹಿಸುವ ಪಕ್ಷ. ಹೀಗಾಗಿ ಹೈಕಮಾಂಡ್ ಏನು ಹೇಳುತ್ತದೆಯೋ ಅದನ್ನು ನಾವು ಪಾಲಿಸುತ್ತೇವೆ ಎಂದು ಸಿದ್ದರಾಮಯ್ಯ ಹೇಳಿದರು.

 


Spread the love

LEAVE A REPLY

Please enter your comment!
Please enter your name here