ಮಂಡ್ಯ: ಮದ್ದೂರು ತಾಲೂಕಿನ ಅಣ್ಣೂರು ಗ್ರಾಮದಲ್ಲಿ ಕಬ್ಬಿನ ಗದ್ದೆಯಲ್ಲಿ ಮೂರು ಚಿರತೆ ಮರಿಗಳು ಪತ್ತೆಯಾದ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ.
Advertisement
ಈ ಘಟನೆ ಚಿನ್ನಮಾದೇಗೌಡ ಎಂಬುವರ ಜಮೀನಿನಲ್ಲಿ ನಡೆದಿದೆ. ರೈತರು ಕಬ್ಬು ಕಟಾವು ಮಾಡುವ ವೇಳೆ ಮರಿಗಳು ಕಂಡು ಬಂದಿದ್ದು, ತಕ್ಷಣ ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದಾರೆ.
ಮಾಹಿತಿ ಪಡೆದ ಅರಣ್ಯಾಧಿಕಾರಿಗಳು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದು, ಮರಿಗಳ ರಕ್ಷಣೆ ಮಾಡಿ ತಾಯಿ ಚಿರತೆ ಜೊತೆ ಮರಿಗಳ ಕಳಿಸಲು ಪರ್ಯಾಯ ವ್ಯವಸ್ಥೆ ಮಾಡಿದ್ದಾರೆ. ಕೆ.ಎಂ.ದೊಡ್ಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.