ಬೆಂಗಳೂರು: ಕರ್ನಾಟಕ ಕಾಂಗ್ರೆಸ್್ನಲ್ಲಿ ನಾಯಕತ್ವ ಬದಲಾವಣೆ ಚರ್ಚೆಯಾಗುತ್ತಿರುವ ಸಂದರ್ಭದಲ್ಲಿಯೇ, ದೆಹಲಿಯಲ್ಲಿ ರಾಹುಲ್ ಗಾಂಧಿ ಭೇಟಿಗೂ ಮುನ್ನ ಮುಖ್ಯಮಂತ್ರಿ ಸಿದ್ದರಾಮಯ್ಯ ಐದು ವರ್ಷ ನಾನೇ ಸಿಎಂ ಎಂದು ಹೇಳಿದ್ದಾರೆ. ಈ ವಿಚಾರಕ್ಕೆ ಸಂಬಂಧಿಸಿದಂತೆ ಸಚಿವ ಸತೀಶ್ ಜಾರಕಿಹೊಳಿ ಪ್ರತಿಕ್ರಿಯೇ ನೀಡಿದ್ದಾರೆ.
Advertisement
ನಗರದಲ್ಲಿ ಮಾತನಾಡಿದ ಅವರು, ಸಿಎಂ ಹೇಳಿದ ಮೇಲೆ ಎಲ್ಲದಕ್ಕೂ ಇತಿಶ್ರೀ ಇದ್ದಂತೆ. ನಾಯಕತ್ವ ಬದಲಾವಣೆ ವಿಚಾರಕ್ಕೆ ಇನ್ನು ಇತಿಶ್ರೀ ಹಾಡಬೇಕು. ಸಿಎಂ ಹೇಳಿರುವುದರಲ್ಲಿ ಹೊಸದೇನಿಲ್ಲ. ಈಗ ಹೇಳಬೇಕಾದ ಸಂದರ್ಭ ಬಂದಿದೆ. ಅದಕ್ಕೆ ಸಿಎಂ ಹೇಳಿದ್ದಾರೆ ಎಂದು ಹೇಳಿದ್ದಾರೆ.
ಶಾಸಕರು ನಾಯಕತ್ವ ಬದಲಾವಣೆ ಮಾಡಿ ಅಂದಿಲ್ಲ. ಸುರ್ಜೆವಾಲಾ ಮುಂದೆ ಎಲ್ಲಾ ಶಾಸಕರು ಅನುದಾನದ ಡಿಮ್ಯಾಂಡ್ ಮಾಡಿರಬಹುದು. ಕೇವಲ 10% ಮಂದಿ ನಾಯಕತ್ವದ ಬದಲಾವಣೆ ಬಗ್ಗೆ ಮಾತಾಡಿರಬಹುದು. ಒಂದು 20 ಜನ ಹೇಳಿರಬಹುದು ಅಷ್ಟೇ ಎಂದರು.