ಬೆಂಗಳೂರು: ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಮಾಜಿ ಉಪಸಭಾಪತಿ ಎನ್.ತಿಪ್ಪಣ್ಣ (97) ನಿಧನರಾಗಿದ್ದಾರೆ. ತಿಪ್ಪಣ್ಣ ಅವರಿಗೆ ಒಬ್ಬ ಪುತ್ರ ಇದ್ದಾರೆ.
Advertisement
ಅವರ ಅಂತ್ಯ ಸಂಸ್ಕಾರವನ್ನು ನಾಳೆ ಹುಟ್ಟೂರು ಚಿತ್ರದುರ್ಗ ಜಿಲ್ಲೆಯ ತುರವಿನೂರಿನಲ್ಲಿ ನಡೆಸಲು ಕುಟುಂಬಸ್ಥರು ನಿರ್ಧರಿಸಿದ್ದಾರೆ. ಬಳ್ಳಾರಿಯ ಅವರ ನಿವಾಸದಲ್ಲಿ ಪಾರ್ಥಿವ ಶರೀರದ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ.
ವಕೀಲರಾಗಿ ಹಲವು ವರ್ಷಗಳ ಕಾಲ ಕಾರ್ಯ ನಿರ್ವಹಿಸಿದ್ದ ಅವರು, ಬಳಿಕ ರಾಜಕೀಯ ಕ್ಷೇತ್ರ ಪ್ರವೇಶಿಸಿದ್ದರು. ನಾಲ್ಕು ಬಾರಿ ವಿಧಾನ ಪರಿಷತ್‌ಗೆ ಆಯ್ಕೆಯಾಗಿದ್ದರು. ಪ್ರತಿಪಕ್ಷದ ಉಪ ನಾಯಕರಾಗಿದ್ದರು. ಅಲ್ಪ ಅವಧಿಗೆ ಸಭಾಪತಿಯಾಗಿಯೂ ಸೇವೆ ಸಲ್ಲಿಸಿದ್ದಾರೆ.