ಮೈಸೂರು: ಗೃಹಲಕ್ಷ್ಮಿ ಯೋಜನೆಯ ಹಣವನ್ನು ಪ್ರತಿ ತಿಂಗಳು ವಿತರಿಸಲು ತೊಡಕುಗಳಿರುವುದರಿಂದ, ಮೂರು ತಿಂಗಳಿಗೊಮ್ಮೆ ಹಣ ನೀಡಲಾಗುತ್ತಿದೆ ಎಂದು ಗ್ಯಾರಂಟಿ ಯೋಜನೆಗಳ ಅಧ್ಯಕ್ಷ ಎಚ್.ಎಂ. ರೇವಣ್ಣ ತಿಳಿಸಿದ್ದಾರೆ.
Advertisement
ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, “ಪ್ರತಿ ತಿಂಗಳು ಹಣ ನೀಡಲು ತಾಂತ್ರಿಕ ಹಾಗೂ ಆಡಳಿತಾತ್ಮಕ ಅಡೆತಡೆಗಳಿವೆ. ಆದ್ದರಿಂದ, ಸದ್ಯಕ್ಕೆ ಮೂರು ತಿಂಗಳಿಗೊಮ್ಮೆ ಹಣ ಬಿಡುಗಡೆ ಮಾಡಲಾಗುತ್ತಿದೆ ಎಂದರು.
ಇನ್ನೊಂದೆಡೆ, ಜಿಎಸ್‌ಟಿ ಸಮಸ್ಯೆ ಕಾರಣದಿಂದಾಗಿ ಸುಮಾರು 1.2 ಲಕ್ಷ ಲಾಭಾಂಶದ ಅರ್ಹ ಮಹಿಳೆಯರಿಗೆ ಹಣ ಜಮೆಯಾಗಿರಲಿಲ್ಲ ಎಂಬುದನ್ನು ಅವರು ಒಪ್ಪಿಕೊಂಡಿದ್ದು, ಇದರಲ್ಲಿ ಈಗ 58 ಸಾವಿರ ಮಂದಿಯ ಸಮಸ್ಯೆ ಬಗೆಹರಿಸಲಾಗಿದ್ದು, ಉಳಿದವರ ಸಮಸ್ಯೆಗಳನ್ನು ಕೂಡ ಬಗೆಹರಿಸುವ ಪ್ರಕ್ರಿಯೆ ಮುಂದುವರಿದಿದೆ” ಎಂದು ತಿಳಿಸಿದ್ದಾರೆ.