ಬೆಂಗಳೂರು: ಸಿದ್ದರಾಮಯ್ಯ ಸ್ಥಾನ ಬಿಟ್ಟುಕೊಡೋದು ಶತಸಿದ್ಧ, ಅಲ್ಪಾವಧಿಯ ವಿಸ್ತರಣೆಯೂ ಸಿಗಲಾರದು ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಹೇಳಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ಸಿದ್ದರಾಮಯ್ಯ ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿದು ಶಿವಕುಮಾರ್ ಆ ಸ್ಥಾನಕ್ಕೇರೋದು ಶತಸಿದ್ಧ ಎಂದು ಹೇಳಿದರು.
ಸಿದ್ದರಾಮಯ್ಯ ಮತ್ತು ಶಿವಕುಮಾರ್ ನಡುವೆ ಸಂಘರ್ಷ ಶುರುವಾಗಿದೆ, ಅದು ಮೊದಲಿಂದಲೂ ಇತ್ತು, ಈಗ ವಿಕೋಪಕ್ಕೆ ಹೋಗಿದೆ, ಕೆಲ ಮಂತ್ರಿಗಳು ಸಹ ಸ್ಥಾನ ಉಳಿಸಿಕೊಳ್ಳಲು ದೆಹಲಿಗೆ ಹೋಗಿದ್ದಾರೆ ಎಂದು ಹೇಳಿದರು.
ಇದರ ನಡುವೆ ಕಾಂಗ್ರೆಸ್ ಹೈಕಮಾಂಡ್ನಿಂದ ನಾಯಕತ್ವ ಬದಲಾವಣೆ ಇಲ್ಲ ಎಂಬ ಸಂದೇಶ ದೊರೆತ ನಂತರವೇ, ಐದು ವರ್ಷಗಳ ಕಾಲ ಮುಖ್ಯಮಂತ್ರಿಯಾಗಿ ಮುಂದುವರಿಯುವುದಾಗಿ ಕರ್ನಾಟಕ ಸಿಎಂ ಸಿದ್ದರಾಮಯ್ಯ ಘೋಷಿಸಿದ್ದಾರೆ ಎಂಬುದು ತಿಳಿದುಬಂದಿದೆ. ಸದ್ಯದ ಮಟ್ಟಿಗೆ ಕರ್ನಾಟಕದಲ್ಲಿ ಯಾವುದೇ ಬದಲಾವಣೆ, ಪ್ರಯೋಗ ಮಾಡುವ ಇರಾದೆಯಲ್ಲಿ ರಾಹುಲ್ ಗಾಂಧಿ ಇಲ್ಲ ಎಂದು ಮೂಲಗಳು ತಿಳಿಸಿವೆ.