ದೇವನಹಳ್ಳಿ: ಹೈಕಮಾಂಡ್ ಭೇಟಿಯ ಬಳಿಕ ಚಿಕ್ಕಬಳ್ಳಾಪುರದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿದ್ದಾರೆ. ಬೆಂಗಳೂರಿನ ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ಬಂದಿಳಿದ ನಂತರ ಮಾಧ್ಯಮಗಳ ಪ್ರಶ್ನೆಗಳಿಗೆ ಪ್ರತಿಕ್ರಿಯಿಸಿದ ಡಿಕೆಶಿ, ಸಿಎಂ ಅವರೇ ಎಲ್ಲ ಪ್ರಶ್ನೆಗಳಿಗೆ ಉತ್ತರ ನೀಡಿದ್ದಾರೆ. ನಾನು ಮತ್ತೆ ಮತ್ತೆ ಮಾತನಾಡೋದು ಸರಿಯಲ್ಲ ಎಂದು ಸ್ಪಷ್ಟಪಡಿಸಿದರು.
Advertisement
ಡಿಕೆಶಿ ಅವರು, ನಾನು ಪಕ್ಷದ ಅಧ್ಯಕ್ಷನಾಗಿದ್ದೇನೆ. ಸಿಎಂ ಅವರ ಹೇಳಿಕೆಯನ್ನು ಗಮನಿಸಿದ್ದೇನೆ. ಅವರು ಏನು ಹೇಳಿದ್ದಾರೆ ಎಂಬುದರ ಬಗ್ಗೆ ನಾನು ಮತ್ತೆ ಪ್ರತಿಕ್ರಿಯೆ ನೀಡೋ ಅವಶ್ಯಕತೆ ಇಲ್ಲ ಎಂದರು. ಶಾಸಕರ ಬೆಂಬಲ, ಅಧಿಕಾರ ಹಂಚಿಕೆ, ಸಿಎಂ ಬದಲಾವಣೆ ಕುರಿತು ಪ್ರತಿಕ್ರಿಯೆ ನೀಡುವುದರ ಬದಲಿಗೆ, ಮಾಧ್ಯಮಗಳ ಪ್ರಶ್ನೆಗಳನ್ನು ತಿರಸ್ಕರಿಸಿದ ಡಿಕೆಶಿ, ನಮ್ಮಗೆ ಯಾವುದೇ ಗಾಬರಿ ಇಲ್ಲ. ನಿಮಗ್ಯಾಕೆ ಗಾಬರಿ? ಎಂದು ಪ್ರಶ್ನಿಸಿದರು.