ರಾಯಚೂರು: ಜಿಲ್ಲೆಯ ಡಿ.ರಾಂಪೂರ ಗ್ರಾಮದಲ್ಲಿ ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ರೈತನೊಬ್ಬ ಹೃದಯಾಘಾತಕ್ಕೊಳಗಾಗಿ ಸ್ಥಳದಲ್ಲೇ ಕುಸಿದು ಬಿದ್ದು ಮೃತಪಟ್ಟ ಘಟನೆ ನಡೆದಿದೆ.
Advertisement
ಮೃತನನ್ನು ಉಪ್ಪರ ವೆಂಕಟೇಶ್ (45) ಎಂದು ಗುರುತಿಸಲಾಗಿದೆ. ಅವರು ಜಮೀನಿನಲ್ಲಿ ತಾನುಟಕಾಲಿಕೆ ಕೆಲಸಗಳಲ್ಲಿ ತೊಡಗಿದ್ದ ಸಂದರ್ಭದಲ್ಲಿ ಏಕಾಏಕಿ ಎದೆನೋವು ಕಾಣಿಸಿಕೊಂಡು ಕುಸಿದು ಬಿದ್ದಿದ್ದಾರೆ.
ಕೂಡಲೇ ಸ್ಥಳಿಯರು ಆಸ್ಪತ್ರೆಗೆ ಕರೆದುಕೊಂಡು ಹೋಗುತ್ತಿದ್ದ ಸಂದರ್ಭದಲ್ಲಿ ಮಾರ್ಗಮಧ್ಯದಲ್ಲೇ ಅವರು ಮೃತಪಟ್ಟಿದ್ದಾರೆ. ಆರೋಗ್ಯವಾಗಿದ್ದ ವೆಂಕಟೇಶ್ ಈ ರೀತಿಯಲ್ಲಿ ಸಾವನ್ನಪ್ಪಿರುವುದು ಕುಟುಂಬಸ್ಥರು ಹಾಗೂ ಗ್ರಾಮಸ್ಥರಲ್ಲಿ ಶೋಕ ಮತ್ತು ಅಚ್ಚರಿಯನ್ನುಂಟುಮಾಡಿದೆ. ಗ್ರಾಮದಲ್ಲಿ ದುಃಖದ ವಾತಾವರಣವಿದೆ.