MRPL ತೈಲ ಘಟಕದಲ್ಲಿ ದುರಂತ: ಇಬ್ಬರು ಕಾರ್ಮಿಕರು ಸಾವು, ಓರ್ವನ ಸ್ಥಿತಿ ಗಂಭೀರ

0
Spread the love

ಮಂಗಳೂರು: ಮಂಗಳೂರು ರಿಫೈನರಿ ಮತ್ತು ಪೆಟ್ರೋಕೆಮಿಕಲ್ಸ್ ಲಿಮಿಟೆಡ್‌ ತೈಲ ಚಲನೆ ವಿಭಾಗದಲ್ಲಿ ಸಂಭವಿಸಿದ ಭಯಾನಕ ದುರಂತದಲ್ಲಿ ಇಬ್ಬರು ಕಾರ್ಮಿಕರು ಪ್ರಾಣ ಕಳೆದುಕೊಂಡಿದ್ದಾರೆ. ಶನಿವಾರ ಬೆಳಗ್ಗೆ 8 ಗಂಟೆ ಸುಮಾರಿಗೆ ಈ ದುರ್ಘಟನೆ ನಡೆದಿದೆ.

Advertisement

ಮೃತರನ್ನು ದೀಪ್ ಚಂದ್ರ ಮತ್ತು ಬಿಜಿಲ್ ಪ್ರಸಾದ್ ಎಂದು ಗುರುತಿಸಲಾಗಿದೆ. ಈ ಇಬ್ಬರು ಟ್ಯಾಂಕ್ FB7029A ನ ಮೇಲ್ಭಾಗದ ಪ್ಲಾಟ್‌ಫಾರ್ಮ್‌ನಲ್ಲಿ ದೋಷ ಪರಿಶೀಲನೆಗಾಗಿ ಹೋದ ವೇಳೆ ಪ್ರಜ್ಞಾಹೀನ ಸ್ಥಿತಿಯಲ್ಲಿ ಕಂಡುಬಂದಿದ್ದಾರೆ.

ಇಬ್ಬರನ್ನೂ ತಕ್ಷಣವೇ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ಸಾವನ್ನಪ್ಪಿದ್ದಾರೆ. ಈ ಸಂದರ್ಭ ರಕ್ಷಣೆಗೆ ಧಾವಿಸಿದ್ದ ಮೂರನೇ ಕಾರ್ಮಿಕ ವಿನಾಯಕ ಮ್ಯಾಗೇರಿ ಆಸ್ಪತ್ರೆಗೆ ದಾಖಲಾಗಿದ್ದು, ಅವರ ಸ್ಥಿತಿ ಸ್ಥಿರವಾಗಿದೆ. ಘಟನೆ ಕುರಿತು ತನಿಖೆ ಮುಂದುವರಿದಿದೆ.


Spread the love

LEAVE A REPLY

Please enter your comment!
Please enter your name here