ಸೆಂಚುರಿ ಸ್ಟಾರ್ ಶಿವರಾಜ್ ಕುಮಾರ್‌ಗೆ ಇಂದು ಜನುಮದಿನದ ಸಂಭ್ರಮ. ಶಿವಣ್ಣ ಇಂದು 63ನೇ ವಸಂತಕ್ಕೆ ಕಾಲಿಟ್ಟಿದ್ದು ಈ ವೇಳೆ ಅಭಿಮಾನಿಗಳ ಸಮ್ಮುಖದಲ್ಲಿ ಶಿವಣ್ಣ ಕೇಕ್ ಕತ್ತರಿಸಿ ಸಂಭ್ರಮಿಸಿದ್ದಾರೆ. ಇದೇ ವೇಳೆ ಯುಎಸ್ ನಲ್ಲಿ ತಮಗೆ ಶಸ್ತ್ರ ಚಿಕಿತ್ಸೆ ನೀಡಿದ ಮೂವರು ಡಾಕ್ಟರ್ ಗಳಿಗೆ ಶಿವಣ್ಣ ಗೌರವ ಸಲ್ಲಿಸಿದ್ದಾರೆ.
ಕಳೆದ ಕೆಲ ತಿಂಗಳ ಹಿಂದೆ ಅಮೆರಿಕಾದಲ್ಲಿ ಶಿವರಾಜ್ ಕುಮಾರ್ ಶಸ್ತ್ರ ಚಿಕಿತ್ಸೆಗೆ ಒಳಗಾಗಿದ್ದರು. ಮುರುಗೇಶ್ ಮನೋಹರನ್ ಎನ್ನುವವರು ಶಿವಣ್ಣನಿಗೆ ಶಸ್ತ್ರ ಚಿಕಿತ್ಸೆ ನೀಡಿದ್ದರು. ಶಿವಣ್ಣನ 63 ನೇ ಹುಟ್ಟು ಹಬ್ಬದ ಸಂಭ್ರಮದ ವೇಳೆ ಈ ವೈದ್ಯರಿಗೆ ಗೌರವ ಸಲ್ಲಿಸಲಾಗಿದೆ. ತಮಗೆ ವಿದೇಶದಲ್ಲಿ ಚಿಕಿತ್ಸೆ ನೀಡಿದ್ದ ಮೂವರು ವೈದ್ಯರನ್ನು ಕರೆಸಿ ಸನ್ಮಾನಿಸಿದ ಶಿವರಾಜ್ ಕುಮಾರ್ ಅವರು ಅವರಿಗೆ ಈ ಮೂಲಕ ಗೌರವ ಸಲ್ಲಿಸಿದ್ದಾರೆ.
ಶಿವಣ್ಣನ ಹುಟ್ಟುಹಬ್ಬದ ಪ್ರಯುಕ್ತ USA ನಿಂದ ಆಗಮಿಸಿರುವ ವೈದ್ಯರು ಹುಟ್ಟುಹಬ್ಬಕ್ಕೆ ಶುಭ ಕೋರಿದ್ದಾರೆ. ಶಿವಣ್ಣನಿಗೆ USA ನಲ್ಲಿ ಚಿಕಿತ್ಸೆ ನೀಡಿದ್ದ ವೈದ್ಯ ಡಾ.ಶ್ರೀನಿವಾಸ್, ಡಾ. ಮುರುಗೇಶ್, ಡಾ.ಮನೋಹರ & ಟೀಂಗೆ ಸನ್ಮಾನ ಮಾಡಲಾಗಿದೆ.