ಬೆಂಗಳೂರು: ಬೆಂಗಳೂರಿನ ರೆಸಾರ್ಟ್‌ನಲ್ಲಿ ಸಿನಿಮಾ ಹಾಡಿಗೆ ಡ್ಯಾನ್ಸ್ ಮಾಡುತ್ತಿದ್ದಾಗ ಹೃದಯಾಘಾತವಾಗಿ ರಾಯಚೂರು ಮೂಲದ ಸೇಲ್ಸ್ ಎಕ್ಸಿಕ್ಯೂಟಿವ್ ಸಾವನ್ನಪ್ಪಿರುವ ದುರ್ಘಟನೆ ನಡೆದಿದೆ. ಬಸವರಾಜ್ (46) ಎಂಬವರು ಲಿಂಗಸುಗೂರು ತಾಲೂಕಿನ ಸರ್ಜಾಪುರ ಗ್ರಾಮದವರು.
Advertisement
ಅವರು ಬೆಂಗಳೂರಿನಲ್ಲಿ ಖಾಸಗಿ ಕಂಪನಿಯಲ್ಲಿ ಕಳೆದ ನಾಲ್ಕು ವರ್ಷಗಳಿಂದ ಸೇಲ್ಸ್ ಎಕ್ಸಿಕ್ಯೂಟಿವ್ ಆಗಿ ಕಾರ್ಯನಿರ್ವಹಿಸುತ್ತಿದ್ದರು. ಶನಿವಾರ ರಾತ್ರಿ ಸ್ನೇಹಿತರ ಜೊತೆ ರೆಸಾರ್ಟ್‌ಗೆ ತೆರಳಿದ್ದ ಅವರು, ನೃತ್ಯವಾಡುತ್ತಿದ್ದಾಗ ಏಕಾಏಕಿ ನೆಲಕ್ಕೆ ಕುಸಿದು ಬಿದ್ದರು.
ಕೂಡಲೇ ಆಸ್ಪತ್ರೆಗೆ ಕರೆದೊಯ್ದರೂ ಯಾವುದೇ ಪ್ರಯೋಜನವಾಗಿಲ್ಲ. ಹೃದಯಾಘಾತದಿಂದ ಬಸವರಾಜ್ ಕೊನೆಯುಸಿರೆಳೆದಿದ್ದಾರೆ. ಸದ್ಯ ಬಸವರಾಜ್ ಮೃತದೇಹವನ್ನು ಬೆಂಗಳೂರಿನಿಂದ ಲಿಂಗಸುಗೂರಿನ ಸರ್ಜಾಪುರಕ್ಕೆ ರವಾನಿಸಲಾಗಿದೆ.