ಬೆಂಗಳೂರು-ಮೈಸೂರು ದಶಪಥದಲ್ಲಿ ಭೀಕರ ಅಪಘಾತ: ನಾಲ್ವರು ಸ್ಥಳದಲ್ಲೇ ಸಾವು

0
Spread the love

ರಾಮನಗರ: ಬೆಂಗಳೂರು–ಮೈಸೂರು ದಶಪಥ ಹೆದ್ದಾರಿಯಲ್ಲಿ ಕಾರು ತಡೆಗೋಡೆಗೆ ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ದುರ್ಮರಣಕ್ಕೀಡಾಗಿರುವ ದುರಂತ ಘಟನೆ ರಾಮನಗರ ತಾಲೂಕಿನ ಜಯಪುರ ಗೇಟ್ ಸಮೀಪ ನಡೆದಿದೆ.

Advertisement

ಕೆಆರ್ ಪೇಟೆ ಮೂಲದ ಮುತ್ತುರಾಜು (55), ತಮ್ಮನಗೌಡ (27), ಸಂಜು (28) ಹಾಗೂ ಚಾಲಕ ಸಚಿನ್ (27) ಮೃತ ದುರ್ದೈವಿಗಳು. ಮೈಸೂರಿನಿಂದ ಬೆಂಗಳೂರಿಗೆ ತೆರಳುತ್ತಿದ್ದ ಸ್ವಿಫ್ಟ್ ಕಾರು, ಚಾಲಕನಿಗೆ ನಿದ್ರೆ ಬಂದು ನಿಯಂತ್ರಣ ತಪ್ಪಿ ತಡೆಗೋಡೆಗೆ ಡಿಕ್ಕಿ ಹೊಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಡಿಕ್ಕಿ ರಭಸಕ್ಕೆ ಕಾರು ಸಂಪೂರ್ಣ ನಜ್ಜುಗುಜ್ಜಾಗಿದ್ದು, ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಗಂಭೀರವಾಗಿ ಗಾಯಗೊಂಡ ಮತ್ತೊಬ್ಬ ವ್ಯಕ್ತಿ ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ ಚಿಕಿತ್ಸೆ ಫಲಿಸದೇ ಅಲ್ಲಿ ಕೊನೆಯುಸಿರೆಳೆದಿದ್ದಾರೆ.

ಘಟನಾ ಸ್ಥಳಕ್ಕೆ ರಾಮನಗರ ಸಂಚಾರಿ ಪೊಲೀಸ್ ಠಾಣೆಯ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ. ವಾಹನದ ಅವಶೇಷಗಳನ್ನು ಕ್ರೇನ್ ಮೂಲಕ ಸ್ಥಳದಿಂದ ತೆರವುಗೊಳಿಸಲಾಯಿತು.


Spread the love

LEAVE A REPLY

Please enter your comment!
Please enter your name here