ಹಿರಿಯ ನಟಿ ‘ಅಭಿನಯ ಸರಸ್ವತಿ’ ಖ್ಯಾತಿಯ ಬಿ.ಸರೋಜಾದೇವಿ ನಿಧನ..!

0
Spread the love

ಕನ್ನಡ ಚಿತ್ರರಂಗದ ಹಿರಿಯ ನಟಿ ಬಿ. ಸರೋಜಾ ದೇವಿ (87)ಅವರು ಇಂದು ವಿಧಿವಶರಾಗಿದ್ದಾರೆ. ಅವರಿಗೆ ಇಬ್ಬರು ಮಕ್ಕಳಿದ್ದಾರೆ. ಕಳೆದ ಕೆಲವು ಸಮಯದಿಂದ ಸರೋಜಾ ದೇವಿ ಅವರು ವಯೋ ಸಹಜ ಕಾಯಿಲೆಯಿಂದ ಬಳಲುತ್ತಿದ್ದರು.

Advertisement

ಆರೂವರೆ ದಶಕಗಳ ಕಾಲ ಅವರು ಚಿತ್ರರಂಗದಲ್ಲಿ ಇದ್ದರು. 2019ರಲ್ಲಿ ರಿಲೀಸ್ ಆದ ಪುನೀತ್ ರಾಜ್ ಕುಮಾರ್ ನಟನೆಯ ‘ನಟಸಾರ್ವಭೌಮ’ ಅವರು ನಟಿಸಿದ ಕೊನೆಯ ಚಿತ್ರ.

ಸರೋಜಾ ಅವರು 1967ರಲ್ಲಿ ಹರ್ಷ ಅವರನ್ನು ವಿವಾಹ ಆದರು. 1986ರಲ್ಲಿ ಪತಿ ನಿಧನ ಹೊಂದಿದರು. ಈಗ ಪತಿ ಹರ್ಷ ಸಮಾಧಿ ಪಕ್ಕದಲ್ಲೇ ಸರೋಜಾ ಅವರ ಅಂತ್ಯಕ್ರಿಯೆ ನಡೆಯಲಿದೆ. ಬೆಂಗಳೂರಿನ ಕೊಡಿಗೆಹಳ್ಳಿಯ ತೋಟದಲ್ಲಿ ಒಕ್ಕಲಿಗೆ ಸಂಪ್ರದಾಯದಂತೆ ಅಂತ್ಯಕ್ರಿಯೆ ನಡೆಯಲಿದೆ.


Spread the love

LEAVE A REPLY

Please enter your comment!
Please enter your name here