ಬಸ್‌ನಲ್ಲಿ ವಿದ್ಯಾರ್ಥಿಗಳಿಗೆ ಪ್ರಥಮಾದ್ಯತೆ ನೀಡಿ

0
Spread the love

ವಿಜಯಸಾಕ್ಷಿ ಸುದ್ದಿ, ಹರಪನಹಳ್ಳಿ: ಸರ್ಕಾರಿ ಬಸ್‌ಗಳಲ್ಲಿ ಶಾಲಾ ಮಕ್ಕಳಿಗೆ ಮೊದಲ ಆದ್ಯತೆ ನೀಡಬೇಕು. ಸಾರ್ವಜನಿಕರು ಸಹಕಾರ ನೀಡುವುದು ಅತ್ಯಗತ್ಯ ಎಂದು ಹರಪನಹಳ್ಳಿ ಕ್ಷೇತ್ರದ ಶಾಸಕಿ ಎಂ.ಪಿ. ಲತಾ ಮಲ್ಲಿಕಾರ್ಜುನ ಹೇಳಿದರು.

Advertisement

ನಗರದ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲಿ ಸೋಮವಾರ ನಡೆದ ಶಕ್ತಿ ಯೋಜನೆಯ ಎರಡು ವರ್ಷದ ಸಂಭ್ರಮಾಚರಣೆ ಕಾರ್ಯಕ್ರಮದಲ್ಲಿ ಅವರು ಭಾಗವಹಿಸಿ ಮಾತನಾಡಿದರು.

ಶಕ್ತಿ ಯೋಜನೆಯಡಿ ಹರಪನಹಳ್ಳಿಯಿಂದ ಎರಡು ವರ್ಷಗಳಲ್ಲಿ 1.40 ಕೋಟಿ ಮಹಿಳೆಯರು ಪ್ರಯಾಣ ಮಾಡಿದ್ದಾರೆ. ಇದರಿಂದ ಸರಕಾರಕ್ಕೆ 40 ಕೋಟಿಗೂ ಹೆಚ್ಚು ಲಾಭವಾಗಿದೆ. ಶಕ್ತಿ ಯೋಜನೆಯಿಂದ ಜಿಲ್ಲೆಯ ಮಹಿಳೆಯರು ಧಾರ್ಮಿಕ ಕ್ಷೇತ್ರಗಳಿಗೆ ಭೇಟಿ ನೀಡಿದ್ದು, ಈ ಯೋಜನೆಯು ಸ್ವತಂತ್ರವಾಗಿ ಸಂಚರಿಸಲು ಮಹಿಳೆಯರಿಗೆ ಸಹಕಾರಿಯಾಗಿದೆ. ಒಟ್ಟಾರೆ ರಾಜ್ಯಾದ್ಯಂತ 500 ಕೋಟಿ ಮಹಿಳೆಯರು ಪ್ರಯಾಣ ಮಾಡಿದ್ದಾರೆ ಎಂಬುದು ರಾಜ್ಯದ ಸಾಧನೆಯಾಗಿದೆ ಎಂದು ಹೇಳಿದರು.

ಮುಂದಿನ ವಾರಗಳಲ್ಲಿ ಹರಪನಹಳ್ಳಿಗೆ ಹೆಚ್ಚುವರಿಯಾಗಿ ಎರಡು ಬಸ್‌ಗಳನ್ನು ನೀಡಲು ಕ್ರಮ ಕೈಗೊಳ್ಳಲಾಗುತ್ತಿದ್ದು, ಕೇಂದ್ರ ಸಚಿವ ಕುಮಾರಸ್ವಾಮಿ ಅವರಿಗೆ 10 ಎಲೆಕ್ಟಿçಕ್ ಬಸ್‌ಗಳನ್ನು ನೀಡುವಂತೆ ಮನವಿ ಮಾಡುವ ವಿಚಾರವಿದೆ ಎಂದರು.

ಕಾರ್ಯಕ್ರಮದಲ್ಲಿ ಸಾರಿಗೆ ವ್ಯವಸ್ಥಾಪಕಿ ಮಂಜುಳ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಂ.ವಿ. ಅಂಜಿನಪ್ಪ, ಚಿಗಟೇರಿ ಮಹಿಳಾ ಘಟಕದ ಅಧ್ಯಕ್ಷೆ ಭಾಗ್ಯಮ್ಮ, ಪ್ರಮುಖರಾದ ರೆಹಮಾನ್ ಸಾಬ್, ವೆಂಕಟೇಶ್ ವಕೀಲ, ಜಂಬಣ್ಣ ಮುತ್ತಿಗಿ, ದಾದಾಪೀರ್, ನಂದಿಬೇವೂರು ಅಶೋಕ್, ಬಾವಿಹಳ್ಳಿ ಚಂದ್ರಪ್ಪ, ಮತ್ತಿಹಳ್ಳಿ ರಾಮಪ್ಪ, ಕವಿತಾ, ವಿಜಯಲಕ್ಷ್ಮೀ, ಮೈದೂರು ರಾಮಣ್ಣ, ಹುಲಿಕಟ್ಟಿ ಚಂದ್ರಪ್ಪ, ಉದಯ್ ಶಂಕರ್, ಮೋರಿಗೆರೆ ಹೇಮಣ್ಣ, ದೇವೇಂದ್ರಗೌಡ, ಗುಡಿಹಳ್ಳಿ ಹಾಲೇಶ್ ಸೇರಿದಂತೆ ಇತರರು ಉಪಸ್ಥಿತರಿದ್ದರು.


Spread the love

LEAVE A REPLY

Please enter your comment!
Please enter your name here