ವಿಜಯಪುರ: ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲೂಕು ಬಿದರಕುಂದಿ ಗ್ರಾಮದ ಬಳಿ ನಡೆದ ಬೈಕ್ ಅಪಘಾತದಲ್ಲಿ ಓರ್ವ ಯುವಕ ಸ್ಥಳದಲ್ಲೇ ಸಾವಿಗೀಡಾಗಿದ್ದಾನೆ, ಇನ್ನೊಬ್ಬನಿಗೆ ಗಂಭೀರ ಗಾಯವಾಗಿದೆ.
Advertisement
ಮೃತ ಯುವಕನನ್ನು ಬಿದರಕುಂದಿ ಗ್ರಾಮದ ಆಕಾಶ ಕುರಿ (23) ಎಂದು ಗುರುತಿಸಲಾಗಿದೆ. ಗಾಯಗೊಂಡವನನ್ನು ಅನ್ವರ ಬಂದಗೀಸಾಬ್ ಜಾಲಗರ್ ಆಗಿದ್ದು,
ತೀವ್ರ ಗಾಯಗೊಂಡ ಅನ್ವರ್ ಅವರನ್ನು ಹೆಚ್ಚಿನ ಚಿಕಿತ್ಸೆಗೆ ಬಾಗಲಕೋಟೆಯ ಖಾಸಗಿ ಆಸ್ಪತ್ರೆಗೆ ರವಾನಿಸಲಾಗಿದೆ. ಘಟನೆಯ ಬಗ್ಗೆ ಮಾಹಿತಿ ಪಡೆದ ಮುದ್ದೇಬಿಹಾಳ ಪೊಲೀಸ್ ಠಾಣೆಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪ್ರಕರಣ ಮುದ್ದೇಬಿಹಾಳ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.