ಉಡುಪಿ: ಉಡುಪಿ ಜಿಲ್ಲೆ ಬೈಂದೂರು ತಾಲೂಕಿನ ಗಂಗೊಳ್ಳಿಯಲ್ಲಿ ಭಾರೀ ದುರಂತ ಸಂಭವಿಸಿದ್ದು, ನಾಡದೋಣಿ ಮಗುಚಿ ಮೂವರು ಮೀನುಗಾರರು ನೀರುಪಾಲಾಗಿರುವ ದುರ್ಘಟನೆ ನಡೆದಿದೆ.
Advertisement
ಸುರೇಶ್ ಖಾರ್ವಿ (45), ರೋಹಿತ್ ಖಾರ್ವಿ (38), ಜಗ್ಗು ಯಾನೆ ಜಗದೀಶ್ ಖಾರ್ವಿ (36) ಮೃತ ದುರ್ಧೈವಿಗಳಾಗಿದ್ದು, ಅರಬ್ಬಿ ಸಮುದ್ರ ಪ್ರಕ್ಷುಬ್ಧಗೊಂಡ ಹಿನ್ನೆಲೆ ವಾಪಸ್ ಆಗುವಾಗ ದೋಣಿ ಮಗುಚಿದೆ.
ದೋಣಿ ಮಗುಚಿದ ವೇಳೆ ಓರ್ವ ನೀರಿಗೆ ಬಿದ್ದಿದ್ದಾನೆ. ಆತನನ್ನು ರಕ್ಷಿಸಲು ಮುಂದಾದ ಇನ್ನಿಬ್ಬರು ಕೂಡ ನೀರುಪಾಲಾಗಿದ್ದಾರೆ. ಸದ್ಯ ನೀರುಪಾಲಾದ ಮೀನುಗಾರರಿಗೆ ಸಮುದ್ರದಲ್ಲಿ ಹುಡುಕಾಟ ನಡೆಸಲಾಗುತ್ತಿದೆ.