ಬೆಂಗಳೂರು: ಕೋವಿಡ್ ಲಸಿಕೆಗೂ ಹೃದಯಾಘಾತ ಪ್ರಕರಣಗಳಿಗೂ ಯಾವುದೇ ಸಂಬಂಧವಿಲ್ಲ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣ ಪ್ರಕಾಶ ಪಾಟೀಲ್ ಹೇಳಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ಕೋವಿಡ್ ಲಸಿಕೆಗೂ ಹಾಸನದಲ್ಲಿ ಸಂಭವಿಸಿದ ಹೃದಯಾಘಾತ ಪ್ರಕರಣಗಳಿಗೂ ಯಾವುದೇ ಸಂಬಂಧವಿಲ್ಲ. ವ್ಯಾಕ್ಸಿನ್ ಬಗ್ಗೆ ಅನುಮಾನ ಬೇಡ ಎಂದರು.
ಇನ್ನೂ ಹಾಸನ ಜಿಲ್ಲೆಯಲ್ಲಿ ಮಾತ್ರ ಪ್ರಕರಣ ಬೇರೆ ಅನ್ನೋದು ತಪ್ಪು. ಹೃದಯಾಘಾತದ ಆತಂಕ ಕೈಬಿಟ್ಟು ಉತ್ತಮ ಜೀವನಶೈಲಿ, ನಿದ್ರೆ ಮತ್ತು ದೈಹಿಕ ವ್ಯಾಯಾಮ ಮಾಡುವುದು ಅಗತ್ಯ. ಹೃದಯಾಘಾತದ ರೋಗ ಲಕ್ಷಣಗಳು ಇದ್ದರೆ ಮಾತ್ರ ಆಸ್ಪತ್ರೆಗೆ ಹೋಗಿ ತಪಾಸಣೆ ಮಾಡಿಸಿಕೊಳ್ಳಿ. ಸುಖಾಸುಮ್ಮನೆ ಹೋಗಬೇಡಿ ಎಂದು ಹೇಳಿದರು.
ಹಾಸನ ಪ್ರಕರಣದಲ್ಲಿ 24 ಮಂದಿ ಮೃತರ ಕುರಿತು ಅಧ್ಯಯನ ನಡೆಸಲಾಗುತ್ತಿದೆ. 20 ಪ್ರಕರಣಗಳಲ್ಲಿ 10 ಹಾರ್ಟ್ ಅಟ್ಯಾಕ್ ಆಗಿದೆ. ಇತರೆ ಕಾರಣಗಳಿಂದ ಸಾವು ಸಂಭವಿಸಿವೆ ಎನ್ನುವುದು ಪ್ರಾಥಮಿಕ ವರದಿಗಳಿಂದ ತಿಳಿದುಬಂದಿದೆ ಎಂದರು.