ವಿಜಯಸಾಕ್ಷಿ ಸುದ್ದಿ, ಗದಗ: ಇಲ್ಲಿನ ಸನ್ಮಾರ್ಗ ಮಹಾವಿದ್ಯಾಲಯದಲ್ಲಿ 2019-20ನೇ ಸಾಲಿನ ವಿಜ್ಞಾನ ವಿಭಾಗದ ವಿದ್ಯಾರ್ಥಿನಿ ಅಪೇಕ್ಷಾ ಸಿ.ಪಾಟೀಲ ತನ್ನ ಪದವಿ ಪೂರ್ವ ಹಂತದಲ್ಲಿ ಉತ್ತಮ ಶ್ರೇಣಿಯೊಂದಿಗೆ ತೇರ್ಗಡೆ ಹೊಂದಿ ಸದ್ಯ ಖಾನ್‌ಪೂರ್‌ದಲ್ಲಿ ಪಿ.ಎಚ್.ಡಿ ಶಿಕ್ಷಣವನ್ನು ಮುಂದುವರೆಸಿರುವ ಪ್ರಯುಕ್ತ ಅವರನ್ನು ಕಾಲೇಜು ಆಡಳಿತ ಮಂಡಳಿಯ ವತಿಯಿಂದ ಸನ್ಮಾನಿಸಲಾಯಿತು.
Advertisement
ವಿದ್ಯಾರ್ಥಿನಿಯ ಸಾಧನೆಗೆ ಸಂಸ್ಥೆಯ ಚೇರ್‌ಮನ್ ಪ್ರೊ. ರಾಜೇಶ ಕುಲಕರ್ಣಿ, ಪ್ರಾಚಾರ್ಯ ಪ್ರೇಮಾನಂದ ರೋಣದ, ನಿರ್ದೇಶಕರಾದ ಪ್ರೊ. ರಾಹುಲ ಒಡೆಯರ್, ಪ್ರೊ. ರೋಹಿತ್ ಒಡೆಯರ್, ಪ್ರೊ. ಪುನೀತ್ ದೇಶಪಾಂಡೆ, ಪ್ರೊ. ಸೈಯ್ಯದ್ ಮತೀನ್ ಮುಲ್ಲಾ, ಆಡಳಿತಾಧಿಕಾರಿಗಳಾದ ಎಮ್.ಸಿ. ಹಿರೇಮಠ ಸೇರಿದಂತೆ ಕಾಲೇಜಿನ ಸಮಸ್ತ ಬೋಧಕ-ಬೋಧಕೇತರ ಸಿಬ್ಬಂದಿಗಳು ಅಭಿನಂದನೆ ಸಲ್ಲಿಸಿದರು.


