ಬಾಗಲಕೋಟೆ:- ಪಂಚಮಸಾಲಿ ಪೀಠಕ್ಕೆ ಜಡಿದಿದ್ದ ಬೀಗ ಓಪನ್ ಆಗಿದ್ದು, ಕೈ ನಾಯಕ ವಿಜಯಾನಂದ ಕಾಶಪ್ಪನವರ್ ಹಾಗೂ ಸ್ವಾಮೀಜಿ ಗುದ್ದಾಟಕ್ಕೆ ತಾತ್ಕಾಲಿಕ ಬ್ರೇಕ್ ಬಿದ್ದಿದೆ. ಕಳೆದ ನಾಲ್ಕು ದಿನದ ಹಿಂದೆಯೇ ಕೂಡಲ ಸಂಗಮದ ಪೀಠಕ್ಕೆ ಬೀಗ ಬಿದ್ದಿತ್ತು.
ವಿವಾದ ತೀವ್ರಗೊಳ್ಳುತ್ತಿದ್ದಂತೆ ಪಂಚಮಸಾಲಿ ಸಮುದಾಯದ ಮುಖಂಡರು ಪಂಚಮಸಾಲಿ ಟ್ರಸ್ಟ್ ಅಧ್ಯಕ್ಷ ವಿಜಯಾನಂದ ಕಾಶಪ್ಪನವರ್ ಅವರೊಂದಿಗೆ ಸಭೆ ಮಾಡಿ ಇದೀಗ ಪೀಠಕ್ಕೆ ಜಡಿದಿದ್ದ ಬೀಗವನ್ನು ತೆರೆದಿದ್ದಾರೆ. ಬಳಿಕ ವಿಜಯಾನಂದ ಕಾಶಪ್ಪನವರ್ ಮತ್ತು ಬಸವಜಯಮೃತ್ಯುಂಜಯ ಸ್ವಾಮೀಜಿ ಬೆಂಬಲಿಗರಿಂದ ಪೀಠದಲ್ಲಿ ಸಭೆ ಕೂಡ ಮಾಡಲಾಗಿದೆ. ಸಿಸಿ ಕ್ಯಾಮೆರಾವನ್ನು ಅಳವಡಿಸಲಾಗಿದೆ. ಜೊತೆಗೆ ವಿವಾದ ಹಿನ್ನಲೆ ಬಂದ ಆಗಿದ್ದ ಪೀಠದಲ್ಲಿರುವ ಕನ್ನಡ ಪ್ರಾಥಮಿಕ ಶಾಲೆ ಕೂಡ ಇದೀಗ ಆರಂಭಗೊಂಡಿದೆ
ಮಂಗಳವಾರ ಹುನಗುಂದ ಪಟ್ಟಣದಲ್ಲಿ ಪಂಚಮಸಾಲಿ ಸಮಾಜದ ಮುಖಂಡರ ಸಭೆ ಬಳಿಕ ಕೂಡಲಸಂಗಮ ಪಂಚಮಸಾಲಿ ಪೀಠಾಧ್ಯಕ್ಷ ಬಸವಜಯಮೃತ್ಯುಂಜಯ ಸ್ವಾಮೀಜಿ ನಿನ್ನೆ ಸಂಜೆ ಪೀಠಕ್ಕೆ ಭೇಟಿ ನೀಡಿದ್ದರು. ಸ್ವಾಮೀಜಿ ಆಗಮಿಸಿದ್ದರಿಂದ ಪಂಚಮಸಾಲಿ ಸಮಾಜದ ಮುಖಂಡರು ಹಾಗೂ ಸಮಾಜದ ಜನರು ಭೇಟಿಗೆ ಬರುತ್ತಿದ್ದಾರೆ. ಸದ್ಯ ಪೀಠಕ್ಕೆ ಹಾಗೂ ಸ್ವಾಮೀಜಿ ಸುರಕ್ಷತಾ ದೃಷ್ಟಿಯಿಂದ ಪೊಲೀಸ್ ಭದ್ರತೆ ನಿಯೋಜನೆ ಮಾಡಲಾಗಿದೆ.