ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ಡೆವಿಲ್ ಸಿನಿಮಾದ ಶೂಟಿಂಗ್ ಗಾಗಿ ಥಾಯ್ಲೇಂಡ್ ಗೆ ತೆರಳಿದ್ದಾರೆ. ಅತ್ತ ಥಾಯ್ಲೆಂಡ್ ನಲ್ಲಿ ದರ್ಶನ್ ಎಂಜಾಯ್ ಮಾಡ್ತಿದ್ರೆ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ನಟನ ಜಾಮೀನು ಭವಿಷ್ಯ ನಿರ್ಧಾರವಾಗಲಿದೆ.
ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್, ನಟಿ ಪವಿತ್ರ ಗೌಡ ಸೇರಿದಂತೆ ಪ್ರಕರಣದ ಒಟ್ಟು ಹದಿನೇಳು ಆರೋಪಿಗಳಿಗೆ 2024ರ ಡಿಸೆಂಬರ್‌ನಲ್ಲಿ ಕರ್ನಾಟಕ ಹೈಕೋರ್ಟ್ ಜಾಮೀನು ನೀಡಿತ್ತು. ಆದರೆ ಅದನ್ನು ಪ್ರಶ್ನಿಸಿ ರಾಜ್ಯ ಸರ್ಕಾರವು ಸುಪ್ರೀಂ ಕೋರ್ಟ್ನಲ್ಲಿ ಮೇಲ್ಮನವಿ ಸಲ್ಲಿಸಿತ್ತು. ದರ್ಶನ್ ಸೇರಿ 7 ಆರೋಪಿಗಳ ಜಾಮೀನು ರದ್ದು ಮಾಡುವಂತೆ ರಾಜ್ಯ ಸರ್ಕಾರ ಕೋರಿದ್ದು, ಅದಕ್ಕೆ ಸಂಬಂಧಿಸಿದಂತೆ ಇಂದು ವಿಚಾರಣೆ ನಡೆಯಲಿದೆ.
ದರ್ಶನ್ ಪ್ರಭಾವಿ ವ್ಯಕ್ತಿ ಆದ ಕಾರಣ ಅವರು ಸಾಕ್ಷಿಗಳ ಮೇಲೆ ಪ್ರಭಾವ ಬೀರುವ ಸಾಧ್ಯತೆ ಇದೆ ಎಂಬ ಕಾರಣದಿಂದ ಅವರಿಗೆ ನೀಡಿರುವ ಜಾಮೀನನ್ನು ರಾಜ್ಯ ಸರ್ಕಾರ ಪ್ರಶ್ನಿಸಿದೆ. ಜಾಮೀನು ರದ್ದು ಮಾಡುವಂತೆ ಕೋರಿ ಸುಪ್ರೀಂ ಕೋರ್ಟ್ನಲ್ಲಿ ಮೇಲ್ಮನವಿ ಸಲ್ಲಿಸಲಾಗಿದೆ. ಇಂದು ಸುಪ್ರೀಂ ಕೋರ್ಟ್ ನೀಡುವ ಆದೇಶದ ಮೇಲೆ ದರ್ಶನ್ ಮತ್ತು ಇತರ ಆರೋಪಿಗಳ ಭವಿಷ್ಯ ನಿರ್ಧಾರ ಆಗಲಿದೆ.