ವಿಜಯಸಾಕ್ಷಿ ಸುದ್ದಿ, ಗದಗ: ವಿಮೆನ್ ಇಂಡಿಯಾ ಮೂವ್ಮೆಂಟ್ ಗದಗ ಜಿಲ್ಲಾ ಸಮಿತಿಯು ಅಸ್ತಿತ್ವಕ್ಕೆ ಬಂದಿದ್ದು, ಜಿಲ್ಲಾಧ್ಯಕ್ಷೆಯಾಗಿ ಸುಮಯ್ಯ ಬಳ್ಳಾರಿ, ಜಿಲ್ಲಾ ಉಪಾಧ್ಯಕ್ಷೆಯಾಗಿ ಯಾಸ್ಮೀನ್ ಕಟ್ಟಮನಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾಗಿ ಕಾಜಲ್‌ಬಾಗೇವಾಡಿ, ಜಿಲ್ಲಾ ಕಾರ್ಯದರ್ಶಿಯಾಗಿ ಅಫ್ರೀನ್, ಜಿಲ್ಲಾ ಕೋಶಾಧಿಕಾರಿಯಾಗಿ ಆತಿಕಾ ಹೊಸಮನಿ ಹಾಗೂ ಜಿಲ್ಲಾ ಸಮಿತಿ ಸದಸ್ಯರುಗಳಾಗಿ ಶಾಹಿಸ್ತ, ಸಹನಾ, ಆಮೀನ, ಫಿರ್ದೋಸ್, ಮುನಿರಾ ಬೇಗಮ್ ಹಾಗೂ ಆಸ್ಮ ಮುಲ್ಲಾ ರವರು ಆಯ್ಕೆಯಾದರು.
ಸಭೆಯನ್ನುದ್ದೇಶಿಸಿ ಮಾತನಾಡಿದ ಸಂಘಟನೆಯ ರಾಜ್ಯ ಪ್ರಧಾನ ಕಾರ್ಯದರ್ಶಿ ನಸ್ರಿಯಾ ಬೆಳ್ಳಾರೆ, ಮಹಿಳಾ ಪ್ರಾತಿನಿಧ್ಯವು ಸಾಮಾಜಿಕ ನ್ಯಾಯದ ಕೀಲಿಕೈ. ಆದ್ದರಿಂದ ಮಹಿಳೆಯರು ರಾಜಕೀಯವಾಗಿ ಸಶಕ್ತರಾಗಬೇಕಿದೆ. ಈ ನಿಟ್ಟಿನಲ್ಲಿ ರಾಷ್ಟ್ರಾದ್ಯಂತ ಮಹಿಳೆಯರನ್ನು ಸಂಘಟಿಸುತ್ತಿರುವ ವಿಮೆನ್ ಇಂಡಿಯಾ ಮೂವ್ಮೆಂಟ್‌ನ ಸದಸ್ಯರಾಗಬೇಕೆಂದು ಕರೆ ನೀಡಿದರು.
ಎಸ್‌ಡಿಪಿಐ ಜಿಲ್ಲಾಧ್ಯಕ್ಷ ಬಿಲಾಲ್ ಹಾಗೂ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅನ್ವರ್ ಬಾಗೇವಾಡಿ ಮಾತನಾಡಿದರು. ಸುಮಯ್ಯ ಸ್ವಾಗತಿಸಿದರು. ಶಿರಹಟ್ಟಿ ವಿಧಾನಸಭಾ ಕ್ಷೇತ್ರದ ಅಧ್ಯಕ್ಷ ಇಸ್ಮಾಯಿಲ್ ಶಿರಹಟ್ಟಿ ಕಾರ್ಯಕ್ರಮ ನಿರೂಪಿಸಿದರು. ಕಾಜಲ್ ಬಾಗೇವಾಡಿ ವಂದಿಸಿದರು.



