ಸ್ಟಾರ್ ತೆಲುಗು ನಟ ವಿಜಯ್ ದೇವರಕೊಂಡ ದಿಢೀರ್ ಆಸ್ಪತ್ರೆಗೆ ದಾಖಲಾಗಿದ್ದು, ಅಭಿಮಾನಿಗಳು ಆತಂಕಗೊಂಡಿದ್ದಾರೆ.
ನಟನಿಗೆ ಡೆಂಗ್ಯೂ ಜ್ವರ ಬಂದಿದ್ದು, ಜುಲೈ 20ರ ಒಳಗೆ ಅವರನ್ನ ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡುವ ಸಾಧ್ಯತೆಯಿದೆ ಎಂದು ವರದಿಗಳು ತಿಳಿಸಿವೆ. ವಿಜಯ್ ದೇವರಕೊಂಡ ಅಥವಾ ಅವರ ತಂಡವು ಆಸ್ಪತ್ರೆ ದಾಖಲಾಗಿರುವ ಬಗ್ಗೆ ಯಾವುದೇ ಅಧಿಕೃತ ಮಾಹಿತಿ ಹಂಚಿಕೊಂಡಿಲ್ಲ. ನಟನ ಆಪ್ತ ಮೂಲಗಳಿಂದ ಈ ಮಾಹಿತಿ ಲಭ್ಯವಾಗಿದೆ.
ನಟ ಆಸ್ಪತ್ರೆಗೆ ದಾಖಲಾದ ಬೆನ್ನಲ್ಲೇ ಆತಂಕಕ್ಕೆ ಒಳಗಾಗಿರುವ ಅಭಿಮಾನಿಗಳು, ತಮ್ಮ ನೆಚ್ಚಿನ ನಟ ಬೇಗ ಗುಣಮುಖರಾಗಲೆಂದು ದೇವರಲ್ಲಿ ಪ್ರಾರ್ಥಿಸುತ್ತಿದ್ದಾರೆ.



