ಧಾರವಾಡ : ಹುಬ್ಬಳ್ಳಿ ಜಿ.ಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಭುವನೇಶ ಪಾಟೀಲ ಅವರು ಶುಕ್ರವಾರ ಅಣ್ಣಿಗೇರಿ ತಾಲೂಕಿನ ಗ್ರಾಮ ಪಂಚಾಯಿತಿ ನಲವಡಿಯಲ್ಲಿ ಮಹಾತ್ಮ ಗಾಂಧಿ ನರೇಗಾ ಯೋಜನೆಯಡಿ ಸ್ಮಶಾನ ಕಾಮಗಾರಿ ಮುಕ್ತಿವನ, ಕೂಸಿನ ಮನೆ ವೀಕ್ಷಣೆ ಮಾಡಿದರು. ಸರಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದರು ಮತ್ತು ಅಣ್ಣಿಗೇರಿ ತಾಲೂಕಿನ ಗ್ರಾಮ ಪಂಚಾಯಿತಿ ಹಳ್ಳಿಕೇರಿಯ ಪಾಂಡುರಂಗ ದೇವಸ್ಥಾನದಲ್ಲಿ ಉಚಿತ ಆರೋಗ್ಯ ಮೇಳಕ್ಕೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಜಿ.ಪಂ ಉಪಕಾರ್ಯದರ್ಶಿ ಬಿ.ಎಸ್. ಮುಗನೂರಮಠ ಸೇರಿದಂತೆ ಅಧಿಕಾರಿಗಳು ಉಪಸ್ಥಿತರಿದ್ದರು.
Advertisement


