ಶಿವಮೊಗ್ಗ:- ಫೋಟೋ ತೆಗೆಸಿಕೊಳ್ಳಲು ಹೋಗಿ ಯುವಕನೋರ್ವ ಹೊಸನಗರ ತಾಲೂಕಿನ ಅಬ್ಬಿ ಫಾಲ್ಸ್‌ನಲ್ಲಿ ಕೊಚ್ಚಿ ಹೋಗಿರುವ ಘಟನೆ ಜರುಗಿದೆ.
ಬೆಂಗಳೂರಿನ ನಾಗರಬಾವಿಯ ಖಾಸಗಿ ಕಂಪನಿಯೊಂದರಲ್ಲಿ ಮ್ಯಾನೇಜರ್ ಆಗಿ ಕೆಲಸ ಮಾಡುತ್ತಿದ್ದ ರಮೇಶ್ ಮೃತ ದುರ್ದೈವಿ. ತಮ್ಮ ಐವರು ಸ್ನೇಹಿತರೊಂದಿಗೆ ಪ್ರವಾಸಕ್ಕೆ ಬಂದಿದ್ದಾಗ ಈ ಅವಘಡ ಸಂಭವಿಸಿದೆ. ಅಬ್ಬಿ ಫಾಲ್ಸ್‌ನಲ್ಲಿ ಫೋಟೋಗೆ ಪೋಸ್ ನೀಡುವಾಗ ಫಾಲ್ಸ್‌ಗೆ ಇಳಿದಿದ್ದಾರೆ. ಈ ವೇಳೆ ನೀರಿನಲ್ಲಿ ಕೊಚ್ಚಿಕೊಂಡು ಹೋಗಿದ್ದಾರೆ.
ಫಾಲ್ಸ್‌ನಲ್ಲಿ ರಮೇಶ್ ಕಣ್ಮರೆಯಾಗುವ 20 ಸೆಕೆಂಡ್‌ನ ವಿಡಿಯೋ ವೈರಲ್ ಆಗಿದೆ. ಘಟನೆಯ ಬಳಿಕ ರಮೇಶ್ ಮೃತದೇಹವು ಫಾಲ್ಸ್‌ನ ಕೆಳಭಾಗದಲ್ಲಿ ಪತ್ತೆಯಾಗಿದೆ. ನಗರ ಠಾಣೆ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.



