ಮಂಡ್ಯ: ಮಂಡ್ಯ ಜಿಲ್ಲೆಯಲ್ಲಿ ವೈದ್ಯಕೀಯ ವಿದ್ಯಾರ್ಥಿ ಹಾಸ್ಟೆಲ್ನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಜರುಗಿದೆ.ಭರತ್ ಆತ್ಮಹತ್ಯೆ ಮಾಡಿಕೊಂಡಿರುವ ವಿದ್ಯಾರ್ಥಿ. ಈತ ಕೊಪ್ಪಳ ಮೂಲದವ ಎನ್ನಲಾಗಿದೆ. ಓದಿನ ಬಗ್ಗೆ ನಿರಾಸಕ್ತಿ ಹೊಂದಿದ್ದ ಭರತ್ ಮೊದಲ ವರ್ಷದ ಪರೀಕ್ಷೆಗಳಿಗೆ ಗೈರಾಗಿದ್ದ. ಅಲ್ಲದೇ ಕಾಲೇಜಿಗೂ ಸಹ ಭರತ್ ಸರಿಯಾಗಿ ಹೋಗುತ್ತಿರಲಿಲ್ಲ.
ಫುಟ್ಬಾಲ್ ಆಟದಲ್ಲಿ ಭರತ್ ಹೆಚ್ಚಿನ ಆಸಕ್ತಿ ಹೊಂದಿದ್ದ. ಮೊದಲ ವರ್ಷ ಗೈರು ಆಗಿದ್ದ ಪರೀಕ್ಷೆಗಳನ್ನು ಈ ಬಾರಿ ಪಾಸ್ ಮಾಡಿಕೊಳ್ಳಬೇಕೆಂದು ಪರೀಕ್ಷಾ ಶುಲ್ಕವನ್ನು ಕಟ್ಟಲು ಭರತ್ ಮುಂದಾಗಿದ್ದ.
ಭಾನುವಾರ ರಾತ್ರಿ 12 ಗಂಟೆವರೆಗೆ ಹಾಸ್ಟೆಲ್ನ ವಿದ್ಯಾರ್ಥಿಗಳೊಂದಿಗೆ ಮಾತನಾಡಿದ್ದಾನೆ. ಬಳಿಕ ತನ್ನ ಕೊಠಡಿಗೆ ಬಂದು ನೇಣು ಬಿಗಿದುಕೊಂಡು ಭರತ್ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಮಂಡ್ಯ ಪೂರ್ವ ಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.



