HomeGadag Newsಆರೋಗ್ಯದ ಕಾಳಜಿ ಮೂಡಿಸಿದ ‘ಮೆಡಿವಿಜನ್’

ಆರೋಗ್ಯದ ಕಾಳಜಿ ಮೂಡಿಸಿದ ‘ಮೆಡಿವಿಜನ್’

For Dai;y Updates Join Our whatsapp Group

Spread the love

ವಿಜಯಸಾಕ್ಷಿ ಸುದ್ದಿ, ಗದಗ: ನಗರದ ಕೆ.ಎಚ್. ಪಾಟೀಲ ವೈದ್ಯಕೀಯ ವಿಜ್ಞಾನ ಸಂಸ್ಥೆಯಲ್ಲಿ ದಶಮಾನೋತ್ಸವದ ಸಂಭ್ರಮಾಚರಣೆ ಅಂಗವಾಗಿ ‘ಮೆಡಿವಿಜನ್ 2025–ವೈದ್ಯಕೀಯ ವಿಜ್ಞಾನ ವಸ್ತುಪ್ರದರ್ಶನ’ಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಎಚ್.ಕೆ. ಪಾಟೀಲ ಸೋಮವಾರ ಚಾಲನೆ ನೀಡಿದರು.

‘ಮೆಡಿವಿಜನ್’ ವಿದ್ಯಾರ್ಥಿಗಳಿಗೆ ಭರಪೂರ ಮಾಹಿತಿ ಒದಗಿಸುವಲ್ಲಿ ಯಶಸ್ವಿಯಾಯಿತು. ಮೂರು ದಿನ ನಡೆಯುವ ವಸ್ತುಪ್ರದರ್ಶನದಲ್ಲಿ ಸೋಮವಾರ 8200 ಮಕ್ಕಳು ಭಾಗವಹಿಸಿದ್ದರು. ಜಿಲ್ಲೆಯ ವಿವಿಧ ಭಾಗಗಳಿಂದ ಸರ್ಕಾರಿ ಹಾಗೂ ಖಾಸಗಿ ಶಾಲೆಗಳ ವಿದ್ಯಾರ್ಥಿಗಳನ್ನು ಶಿಕ್ಷಕರು ಕರೆತಂದಿದ್ದರು. ಕಣ್ಣು, ಮೂಗು, ಬಾಯಿ, ಕಿವಿ ಸೇರಿದಂತೆ ಇಡೀ ದೇಹದ ಸಂಕೀರ್ಣ ರಚನೆಗಳನ್ನು ಯುವ ವೈದ್ಯರು ವಿದ್ಯಾರ್ಥಿಗಳಿಗೆ ಸರಳವಾಗಿ ತಿಳಿಸಿಕೊಟ್ಟರು.

ವೈದ್ಯರ ವಿವರಣೆಯನ್ನು ಮಕ್ಕಳು ಆಸಕ್ತಿಯಿಂದ ಕೇಳಿ ತಿಳಿದುಕೊಂಡರು. ‘ಸರ್ವಜನೋ ಅರೋಗ್ಯಂ ಭವತು’ ಎಂಬುದು ಕೆ.ಎಚ್. ಪಾಟೀಲ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಘೋಷ ವಾಕ್ಯವಾಗಿದ್ದು, ಸರ್ವರೂ ಆರೋಗ್ಯದ ಬಗ್ಗೆ ಕಾಳಜಿ ಹೊಂದಲು ತಿಳುವಳಿಕೆ ಮೂಡಿಸುವಲ್ಲಿ ಪ್ರದರ್ಶನ ಯಶಸ್ವಿಯಾಯಿತು. ಜನರಲ್ ಮೆಡಿಸನ್, ಮನೋವೈದ್ಯಕೀಯ, ಸರ್ಜರಿ, ಇಎನ್‌ಟಿ, ರಕ್ತ, ಕರಳು, ಕಿಡ್ನಿ, ಮೂಳೆ, ಅನಾಟಮಿ, ಪ್ರಸೂತಿ ಮತ್ತು ಹೆರಿಗೆ ಸೇರಿದಂತೆ ವೈದ್ಯಕೀಯ ವಿಜ್ಞಾನದಲ್ಲಿರುವ ಶಾಖೆಗಳ ವಿವರಣೆ ನೀಡಲು ಪ್ರತ್ಯೇಕ ಸ್ಟಾಲ್‌ಗಳನ್ನು ನಿರ್ಮಿಸಿ, ಅದಕ್ಕೆ ಸಂಬಂಧಿಸಿದ ಮಾದರಿಗಳನ್ನು ಇರಿಸಲಾಗಿತ್ತು. ವಿದ್ಯಾರ್ಥಿಗಳಿಗೆ ಜ್ಞಾನ ಹಂಚುವುದರೊಂದಿಗೆ ವೈದ್ಯಕೀಯ ಅಭ್ಯಾಸ ಮಾಡುತ್ತಿರುವ ಯುವ ವೈದ್ಯರ ಕಲಿಕೆಗೂ ಪೂರಕವಾಗಿತ್ತು.

ವಸ್ತು ಪ್ರದರ್ಶನ ಕಾರ್ಯಕ್ರಮದಲ್ಲಿ ಶಿರಹಟ್ಟಿ ಶಾಸಕ ಡಾ. ಚಂದ್ರು ಲಮಾಣಿ, ವಿ.ಪ ಸದಸ್ಯ ಎಸ್.ವಿ. ಸಂಕನೂರ, ಗದಗ-ಬೆಟಗೇರಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಅಕ್ಬರ್‌ಸಾಬ್ ಬಬರ್ಚಿ, ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಬಿ.ಬಿ. ಅಸೂಟಿ, ತಾಲೂಕಾಧ್ಯಕ್ಷ ಅಶೋಕ್ ಮಂದಾಲಿ, ಸಿದ್ದು ಪಾಟೀಲ, ವಾಸಣ್ಣ ಕುರಡಗಿ, ಎಸ್.ಎನ್. ಬಳ್ಳಾರಿ, ಜಿಮ್ಸ್ ನಿರ್ದೇಶಕ ಬಸವರಾಜ ಬೊಮ್ಮನಹಳ್ಳಿ, ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರೋಹನ್ ಜಗದೀಶ್, ಜಿಲ್ಲಾ ಶಸ್ತ್ರಚಿಕಿತ್ಸಕ ಡಾ. ಕರಿಗೌಡರ, ಡಿಡಿಪಿಐ ಆರ್.ಎಸ್. ಬುರಡಿ ಹಾಗೂ ಸಂಸ್ಥೆಯ ಬೋಧಕ-ಬೋಧಕೇತರ ಸಿಬ್ಬಂದಿಗಳು ಉಪಸ್ಥಿತರಿದ್ದರು.

ಮಾದರಿ ತೋರಿಸಿ ವಿವರಣೆ ನೀಡಿದ್ದರಿಂದ ಮಕ್ಕಳ ಆಸಕ್ತಿಯೂ ಹಿಗ್ಗಿತ್ತು. ಮೆಡಿವಿಜನ್‌ನಲ್ಲಿ ಮಾನವ ಶರೀರ ರಚನೆ, ನೈಜ ಅಂಗಾಗಗಳ ಪ್ರದರ್ಶನ, ಶರೀರ ಕ್ರಿಯೆ-ತಿಳುವಳಿಕೆ, ಆರೋಗ್ಯದ ಬಗ್ಗೆ ಮಾಹಿತಿ, ಕ್ಯಾನ್ಸರ್, ಸಕ್ಕರೆ ಕಾಯಿಲೆ, ರಕ್ತದೊತ್ತಡ, ಹೃದಯ ಕಾಯಿಲೆ, ಥೈರಾಯ್ಡ್ ಇನ್ನಿತರೆ ಕಾಯಿಲೆಗಳ ಬಗ್ಗೆ ತಿಳುವಳಿಕೆ, ಆಧುನಿಕ ವೈದ್ಯಕೀಯ ಉಪಕರಣಗಳ ಪ್ರದರ್ಶನ, ಆಹಾರ ಬಗ್ಗೆ ಅರಿವು ಮೂಡಿಸುವ ವೈಶಿಷ್ಟ್ಯಗಳು ಕಂಡುಬಂದವು. ಭವಿಷ್ಯದಲ್ಲಿ ವೈದ್ಯರಾಗುವ ಕನಸುಗಳಿಗೆ ಪ್ರೇರಣೆ ನೀಡುವುದು ಈ ಕಾರ್ಯಕ್ರಮದ ಉದ್ದೇಶವಾಗಿತ್ತು.


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!