ವಿಜಯಸಾಕ್ಷಿ ಸುದ್ದಿ, ಗದಗ: ಸೊರಟೂರಲ್ಲಿ ಆರೋಗ್ಯ, ಕ್ಷೇಮ ಕೇಂದ್ರ ಕಟ್ಟಡ ನಿರ್ಮಾಣ ಹಾಗೂ ವೆಂಕಟಾಪುರ ರಸ್ತೆ ನಿರ್ಮಾಣಕ್ಕೆ ಇನಾಂ ವೆಂಕಟಾಪುರದಲ್ಲಿ ಮಂಗಳವಾರ ಗದಗ ಜಿಲ್ಲಾ ಉಸ್ತುವಾರಿ ಸಚಿವ ಡಾ. ಎಚ್.ಕೆ. ಪಾಟೀಲ ಚಾಲನೆ ನೀಡಿದರು.
ಗದಗ ತಾಲೂಕಿನ ಯಲಿಶಿರುಂದ-ವೆಂಕಟಾಪೂರ-ಸೊರಟೂರ ಜಿಲ್ಲಾ ಮುಖ್ಯ ರಸ್ತೆ ಕಿ.ಮೀ. 0.00ರಿಂದ 0.750, ಕಿ.ಮೀ. 3.50ರಿಂದ 5.68ರವರೆಗೆ ಅಭಿವೃದ್ಧಿ ಹಾಗೂ ಕಿ.ಮೀ. 0.850ರಿಂದ 3.30ರವರೆಗೆ ಮರುಡಾಂಬರೀಕರಣ ಕಾಮಗಾರಿಗೆ ಸಚಿವ ಎಚ್.ಕೆ. ಪಾಟೀಲ ಭೂಮಿಪೂಜೆ ನೆರವೇರಿಸಿದರು. ಕಾಮಗಾರಿಗೆ 3 ಕೋಟಿ ಅನುದಾನ ಒದಗಿಸಲಾಗಿದೆ.
ಗದಗ ತಾಲೂಕಿನ ಸೊರಟೂರ-ಮುಳಗುಂದ ವ್ಹಾಯಾ ನೀಲಗುಂದ ಜಿಲ್ಲಾ ಮುಖ್ಯ ರಸ್ತೆ ಕಿ.ಮೀ. 1.50ರಿಂದ 5.50ರವರೆಗೆ ಅಂದಾಜು 1.50 ಕೋಟಿ ಅನುದಾನದಲ್ಲಿ ಅಭಿವೃದ್ಧಿ ಕಾಮಗಾರಿಗೆ ಚಾಲನೆ ನೀಡಲಾಗಿದೆ.
ಈ ಸಂದರ್ಭದಲ್ಲಿ ಮಾತನಾಡಿದ ಸಚಿವ ಎಚ್.ಕೆ. ಪಾಟೀಲ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ಸೊರಟೂರಿನಲ್ಲಿ ಆರೋಗ್ಯ ಮತ್ತು ಕ್ಷೇಮ ಕೇಂದ್ರ ಕಟ್ಟಡ ನಿರ್ಮಾಣ ಕಾಮಗಾರಿಗೆ 61 ಲಕ್ಷ ರೂಗಳನ್ನು ಒದಗಿಸಿದೆ. ಈ ಎಲ್ಲ ಕಾಮಗಾರಿಗಳು ಗುಣಮಟ್ಟದಿಂದ ಕೂಡಿರಲಿ ಎಂದು ತಿಳಿಸಿದರು.
ಗ್ಯಾರಂಟಿ ಸಮಿತಿ ತಾಲೂಕಾ ಅಧ್ಯಕ್ಷ ಅಶೋಕ ಮಂದಾಲಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರೋಹನ್ ಜಗದೀಶ್ ಸೇರಿದಂತೆ ಗ್ರಾಮ ಪಂಚಾಯಿತಿ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು ಇದ್ದರು.