ನವದೆಹಲಿ: 3,000 ಕೋಟಿ ರೂ ಮೊತ್ತದ ಸಾಲದ ಅಕ್ರಮ ವರ್ಗಾವಣೆ ಮತ್ತಿತರ ಆರೋಪದ ಮೇಲೆ ಜಾರಿ ನಿರ್ದೇಶನಾಲಯವು ಅನಿಲ್ ಅಂಬಾನಿಗೆ ಸೇರಿದ ವಿವಿಧ ಸ್ಥಳಗಳ ಮೆಲೆ ದಾಳಿ ಮಾಡಿದೆ. ರಾಷ್ಟ್ರ ರಾಜಧಾನಿ ದೆಹಲಿ ಮತ್ತು ಮುಂಬೈನ 40 ಕ್ಕೂ ಹೆಚ್ಚು ಪ್ರದೇಶಗಳಲ್ಲಿ ಅವರು ಏಕಕಾಲದಲ್ಲಿ ಶೋಧ ನಡೆಸುತ್ತಿದ್ದಾರೆ.
ಕೇಂದ್ರ ತನಿಖಾ ದಳ ಸಲ್ಲಿಸಿದ ಎರಡು ಎಫ್‌ಐಆರ್‌ಗಳನ್ನು ಆಧರಿಸಿ ED ಈ ಕ್ರಮಗಳನ್ನು ತೆಗೆದುಕೊಂಡಿದೆ ಎಂದು ತಿಳಿದುಬಂದಿದೆ. ಅನಿಲ್ ಅಂಬಾನಿ 2017-19ರ ನಡುವೆ ಯೆಸ್ ಬ್ಯಾಂಕಿನಿಂದ ಸುಮಾರು 3,000 ಕೋಟಿ ರೂ. ಸಾಲ ಪಡೆದು ಅದನ್ನು ಬೇರೆಡೆಗೆ ವರ್ಗಾಹಿಸಿದ್ದಾರೆ ಎಂಬ ಆರೋಪಗಳಿವೆ.
ಯೆಸ್ ಬ್ಯಾಂಕ್ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ತನಿಖಾ ದಳ (ಸಿಬಿಐ) ದಾಖಲಿಸಿದ್ದ 2 ಎಫ್‌ಐಆರ್‌ಗಳನ್ನು ಆಧರಿಸಿ ಹಾಗೂ ಬ್ಯಾಂಕ್ ಆಫ್ ಬರೋಡಾ, ನ್ಯಾಷನಲ್ ಹೌಸಿಂಗ್ ಬ್ಯಾಂಕ್ ಮತ್ತಿತರ ಏಜೆನ್ಸಿಗಳಿಂದ ದೊರೆತ ಮಾಹಿತಿ ಆಧಾರದ ಮೇಲೆ ತೀವ್ರ ಶೋಧ ನಡೆಸುತ್ತಿದೆ. 25ಕ್ಕೂ ಹೆಚ್ಚು ಮಂದಿಯನ್ನೂ ವಿಚಾರಣೆಗೆ ಒಳಪಡಿಸಲಾಗಿದೆ.