ಬೆಂಗಳೂರು: ಆಂಧ್ರದಲ್ಲಿ ಹತ್ಯೆ ಆಗಿರುವ ಹಿನ್ನೆಲೆ ಆ ರಾಜ್ಯದವರೇ ತನಿಖೆ ಮಾಡ್ತಾರೆ ಎಂದುಗೃಹ ಸಚಿವ ಡಾ. ಜಿ ಪರಮೇಶ್ವರ್ ಹೇಳಿದ್ದಾರೆ. ಆಂಧ್ರದಲ್ಲಿ ಇಬ್ಬರು ಬಿಜೆಪಿ ಕಾರ್ಯಕರ್ತರ ಹತ್ಯೆ ಪ್ರಕರಣ ಸಂಬಂಧ ನಗರದಲ್ಲಿ ಮಾತನಾಡಿದ ಅವರು, ಆಂಧ್ರ ಪ್ರದೇಶದ ಪೊಲೀಸರು ಈ ಬಗ್ಗೆ ತನಿಖೆ ಮಾಡ್ತಾರೆ.
ಹತ್ಯೆಯಾದವರು ನಮ್ಮ ರಾಜ್ಯದವರಾಗಿರೋದ್ರಿಂದ ಆಂಧ್ರ ಪೊಲೀಸರು ಇಲ್ಲಿಗೂ ಬಂದು ತನಿಖೆ ಮಾಡ್ತಾರೆ. ನಮ್ಮ ಪೊಲೀಸರು ತನಿಖೆಯ ಫಾಲೋಅಪ್ ಮಾಡ್ತಾರೆ. ಆಂಧ್ರದಲ್ಲಿ ಹತ್ಯೆ ಆಗಿರುವ ಹಿನ್ನೆಲೆ ಆ ರಾಜ್ಯದವರೇ ತನಿಖೆ ಮಾಡ್ತಾರೆ ಎಂದು ಸ್ಪಷ್ಟಪಡಿಸಿದ್ದಾರೆ.
ಚಿನ್ನಸ್ವಾಮಿ ಕಾಲ್ತುಳಿತ ಪ್ರಕರಣ ನ್ಯಾ.ಕುನ್ಹಾ ವರದಿ ಮೇಲೆ ಸಂಪುಟದಲ್ಲಿ ತೀರ್ಮಾನ ತೆಗೆದುಕೊಳ್ಳುತ್ತೇವೆ. ಅವರು ಏನು ಶಿಫಾರಸು ಕೊಟ್ಟಿದ್ದಾರೋ ಅದರಂತೆ ತೀರ್ಮಾನ ಮಾಡಲಾಗುವುದು.
ಕ್ರಿಮಿನಲ್ ಪ್ರೊಸೀಜರ್ ಬಗ್ಗೆಯೂ ಶಿಫಾರಸು ಮಾಡಿದ್ದಾರೆ. ಕುನ್ಹಾ ಅವರ ವರದಿಯಲ್ಲಿ ಕೊಹ್ಲಿ ಅವರ ಬಗ್ಗೆ ನಿರ್ದಿಷ್ಟವಾಗಿ ಪ್ರಸ್ತಾಪ ಇಲ್ಲ. ಯಾರ್ಯಾರು ಏನೇನು ಮಾಡಿದ್ದಾರೆ ಅನ್ನೋದು ಇದೆ. ಎಲ್ಲವನ್ನು ನೋಡಿ, ಸಂಪುಟದಲ್ಲಿ ತೀರ್ಮಾನ ತೆಗೆದುಕೊಳ್ಳುತ್ತೇವೆ ಎಂದಿದ್ದಾರೆ.