ಬೆಂಗಳೂರು:- ಚಿತ್ರದುರ್ಗದ ರೇಣುಕಾಸ್ವಾಮಿ ಕುಟುಂಬಕ್ಕೆ ನ್ಯಾಯ ಸಿಗುತ್ತೆ ಎಂದು ನಂಬಿದ್ದೇನೆ ಎಂದು ಸ್ಯಾಂಡಲ್ ವುಡ್ ಕ್ವೀನ್ ನಟಿ ರಮ್ಯಾ ಹೇಳಿದ್ದಾರೆ.
Advertisement
ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ನಡೆದ ವಿಚಾರಣೆಯ ಬಗ್ಗೆಯ ಪೋಸ್ಟ್ ಮಾಡಿರುವ ರಮ್ಯಾ, ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕುಟುಂಬಕ್ಕೆ ನ್ಯಾಯ ಸಿಗಬಹುದು ಎಂದು ನಾನು ನಂಬಿದ್ದೇನೆ. ಭಾರತದ ಸಾಮಾನ್ಯ ಪ್ರಜೆಗೂ ಸುಪ್ರೀಂ ಕೋರ್ಟ್ ಆಶಾಕಿರಣ ಎಂದು ರಮ್ಯಾ ಇನ್‌ಸ್ಟಾದಲ್ಲಿ ಸ್ಟೇಟಸ್ ಹಾಕಿದ್ದಾರೆ.
ರಮ್ಯಾ ಬರೆದುಕೊಂಡಿರುವ ಪೋಸ್ಟ್ ಬಗ್ಗೆ ಸಾಕಷ್ಟು ಚರ್ಚೆಗೆ ಕಾರಣವಾಗಿದೆ. ಈ ಹಿಂದೆ ದರ್ಶನ್ ಬಂಧನವಾದಾಗ ನಟಿ ರಮ್ಯಾ ಜಾಲತಾಣದಲ್ಲಿ ಪೋಸ್ಟ್ ಮೂಲಕ ಪ್ರತಿಕ್ರಿಯೆ ನೀಡಿದ್ದರು. ಇದೀಗ ಸುಪ್ರೀಂ ಕೋರ್ಟ್ ನಡೆದ ವಿಚಾರಣೆಯ ಬಗ್ಗೆಯ ಪೋಸ್ಟ್ ಹಾಕಿದ್ದಾರೆ. ಇದು ಕೊಂಚ ಡಿ ಬಾಸ್ ಅಭಿಮಾನಿಗಳನ್ನು ಕೆರಳಿಸಿದೆ.