ಅಮ್ಮ ಫೌಂಡೇಶನ್ ವತಿಯಿಂದ ಡಾ. ಬಸವರಾಜ ಬಳ್ಳಾರಿ ಜನ್ಮದಿನ ಆಚರಣೆ

0
Spread the love

ವಿಜಯಸಾಕ್ಷಿ ಸುದ್ದಿ, ಗದಗ: ಅಮ್ಮ ಫೌಂಡೇಶನ್ ಮಾರ್ಗದರ್ಶಕರು, ಗದಗ ಜಿಲ್ಲಾ ನೌಕರರ ಸಂಘದ ಜಿಲ್ಲಾಧ್ಯಕ್ಷರು, ತಾಲೂಕಾ ಹಿಂದುಳಿದ ವರ್ಗಗಳ ಕಲ್ಯಾಣ ಅಧಿಕಾರಿ ಬಸವರಾಜ್ ಬಳ್ಳಾರಿಯವರ 48ನೇ ಜನ್ಮದಿನದ ಪ್ರಯುಕ್ತ ಅಮ್ಮ ಫೌಂಡೇಶನ್ ಬೆಂಗಳೂರು ಇವರ ಆಶ್ರಯದಲ್ಲಿ ಸಾಮಾಜಿಕ ಕಾರ್ಯಕ್ರಮಗಳ ಮೂಲಕ ಸರಳ ಹಾಗೂ ಅರ್ಥಪೂರ್ಣವಾಗಿ ಆಚರಿಸಲಾಯಿತು.

Advertisement

ವಿಕಲಚೇತನ ಹಾಗೂ ಬುದ್ಧಿಮಾಂದ್ಯ ಮಕ್ಕಳ ಶಾಲೆ ಬೆಟಗೇರಿಯಲ್ಲಿ ಮಕ್ಕಳ ಜೊತೆಗೂಡಿ ಜನ್ಮದಿನವನ್ನು ಆಚರಿಸಲಾಯಿತು. ರಣೆ ಮಾಡಲಾಯಿತು. ಗಾನಯೋಗಿ ಶ್ರೀ ಡಾ. ಪಂಡಿತ ಪುಟ್ಟರಾಜ ಗವಾಯಿಗಳ ಆಶ್ರಮದಲ್ಲಿ ಭಕ್ತರಿಗೆ ಮತ್ತು ವಿದ್ಯಾರ್ಥಿಗಳಿಗೆ ಅನ್ನ ಸಂತರ್ಪಣೆ ನೆರವೇರಿಸಲಾಯಿತು.

ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದ ಅಮ್ಮ ಫೌಂಡೇಶನ್ ಅಧ್ಯಕ್ಷರು, ವಕೀಲರಾದ ಮೈಲಾರಪ್ಪ ಡಿ.ಎಚ್, ಅಮ್ಮ ಫೌಂಡೇಶನ್ ಮಾರ್ಗದರ್ಶಕರಾದ ಡಾ. ಬಸವರಾಜ್ ಬಳ್ಳಾರಿಯವರ ಮಾರ್ಗದರ್ಶನದಲ್ಲಿ ಸದಾ ಸಾಮಾಜಿಕ ಕಾರ್ಯಗಳ ಜೊತೆಗೆ ವಿಶೇಷ ದಿನಗಳಲ್ಲಿ ದೀನ ದಲಿತರಿಗೆ, ಬಡವರಿಗೆ ಅನ್ನ ಸಂತರ್ಪಣೆ ಕಾರ್ಯಕ್ರಗಳನ್ನು ಮಾಡುವ ಮೂಲಕ ಸಾಮಾಜಿಕ ಸೇವೆಯಲ್ಲಿ ಫೌಂಡೇಶನ್ ಮೂಂಚೂಣಿಯಲ್ಲಿದೆ ಎಂದರು.

ಅಮ್ಮ ಫೌಂಡೇಶನ್ ಪ್ರಧಾನ ಕಾರ್ಯದರ್ಶಿ ವಿಶ್ವನಾಥ ದಲಾಲಿ ಮಾತನಾಡಿ, ಸಮಾಜ ಸೇವೆಯಲ್ಲಿ ಡಾ. ಬಸವರಾಜ ಬಳ್ಳಾರಿ ಗುರುಗಳ ಸೇವೆ ಅಪಾರ. ಅವರ ಮಾರ್ಗದರ್ಶನದಲ್ಲಿ ಸಾಕಷ್ಟು ಸಮಾಜಮುಖಿ ಕಾರ್ಯಕ್ರಮಗಳು ನೆರವೇರಿದ್ದು, ಮುಂಬರುವ ದಿನಗಳಲ್ಲಿ ಇನ್ನಷ್ಟು ಸಾಮಾಜಿಕ ಕಾರ್ಯಕ್ರಮಗಳನ್ನು ಮಾಡುತ್ತೇವೆ. ಬಳ್ಳಾರಿ ಗುರುಗಳ ನಾಯಕತ್ವದ ಗುಣ, ಅವರ ವೃತ್ತಿ ನಿಷ್ಠೆ ನಮ್ಮೆಲ್ಲರಿಗೂ ಮಾದರಿಯಾಗಿದೆ ಎಂದರು.

ಅಮ್ಮ ಫೌಂಡೇಶನ್ ಖಜಾಂಚಿ ಮಾರುತಿ ಜಿ.ಎಚ್, ಸಾಂಸ್ಕೃತಿಕ ಕಾರ್ಯದರ್ಶಿ ಪರಶುರಾಮ ತಳವಾರ, ಸಂಘಟನಾ ಕಾರ್ಯದರ್ಶಿ ಸುರೇಶ ಹಾಳಕೇರಿ, ಸಹ ಸಂಘಟನಾ ಕಾರ್ಯದರ್ಶಿ ಬಸವರಾಜ್ ಲಾಲಿ, ಸಾಮಾಜಿಕ ಜಾಲತಾಣ ಸಂಚಾಲಕ ಪ್ರಶಾಂತಯ್ಯ ಗುರುಮಠ, ಕಾರ್ಯಾಧ್ಯಕ್ಷ ಮಂಜುನಾಥ ನಿಡುಗುಂದಿ ಸೇರಿದಂತೆ ಸರ್ವ ಸದಸ್ಯರು ಇದ್ದರು.


Spread the love

LEAVE A REPLY

Please enter your comment!
Please enter your name here