ಬೆಂಗಳೂರು:– ಹೊಳೆನರಸೀಪುರ ರೇಪ್ ಕೇಸ್ ಗೆ ಸಂಬಂಧಿಸಿದಂತೆ 2ನೇ ಬಾರಿಯೂ ಪ್ರಜ್ವಲ್ ರೇವಣ್ಣ ಜಾಮೀನು ಅರ್ಜಿ ವಜಾ ಆಗಿದೆ. ಅತ್ಯಾಚಾರ ಪ್ರಕರಣದ ಆರೋಪಿ, ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಜಾಮೀನು ಕೋರಿ 2ನೇ ಬಾರಿಗೆ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ವಾದ ಪ್ರತಿವಾದ ಆಲಿಸಿ ಇಂದು ತೀರ್ಪು ನೀಡಿದೆ.
ಈ ಬಾರಿಯೂ ಪ್ರಜ್ವಲ್ ರೇವಣ್ಣಗೆ ನಿರಾಸೆಯಾಗಿದ್ದು, ಜಾಮೀನು ಅರ್ಜಿಯನ್ನು ವಜಾಗೊಳಿಸಿ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಆದೇಶ ಹೊರಡಿಸಿದೆ.
ಮನೆಗೆಲಸದ ಮಹಿಳೆ ಮೇಲಿನ ಅತ್ಯಾ*ಚಾರ ಪ್ರಕರಣದ ಆರೋಪಿ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಜಾಮೀನು ಕೋರಿ 2ನೇ ಬಾರಿಗೆ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ವಾದ ಪ್ರತಿವಾದ ಆಲಿಸಿ ಶುಕ್ರವಾರಕ್ಕೆ ತೀರ್ಪು ಕಾಯ್ದಿರಿಸಿತ್ತು. ಅದರಂತೆ ಇಂದು ತೀರ್ಪು ಪ್ರಕಟವಾಗಿದ್ದು, ಮಾಜಿ ಸಂಸದರಿಗೆ ಜೈಲ್ ಫಿಕ್ಸ್ ಎಂಬಂತಾಗಿದೆ.