ದಾವಣಗೆರೆ: ದಾವಣಗೆರೆ ಪೋಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿ ಖೋಟಾ ನೋಟು ಚಲಾವಣೆ ಮಾಡುತ್ತಿದ್ದ ಆರೋಪಿಗಳನ್ನು ಬಂಧಿಸಿದ್ದಾರೆ.
ವಿಜಯನಗರ ಜಿಲ್ಲೆಯ ಹೂವಿನ ಹಡಗಲಿ ತಾಲೂಕಿನ ನಡುವಿನ ತಾಂಡಾದ ಸಂತೋಷಕುಮಾರ(32), ದಾವಣಗೆರೆ ಜಿಲ್ಲೆಯ ಕುಕ್ಕವಾಡ ಗ್ರಾಮದ ಕುಬೇರಪ್ಪ (60), ವಿಜಯನಗರ ಜಿಲ್ಲೆಯ ಕೊಟ್ಟೂರು ತಾಲೂಕಿನ ಬೇವೂರು ಗ್ರಾಮದ ವಿರೇಶ (37)ಹನುಮಂತಪ್ಪ(75) ಬಂಧಿತ ಆರೋಪಿಗಳಾಗಿದ್ದು, ಚಿರಡೋಣಿ ಗ್ರಾಮದ ಸಪ್ತಗಿರಿ ಬಾರ್ ಅಂಡ್ ರೆಸ್ಟೋರೆಂಟ್ ಬಳಿ ಖೋಟಾ ನೋಟು ಚಲಾವಣೆಗೆ ಯತ್ನಿಸುತ್ತಿದ್ದರು.
ಖಚಿತ ಮಾಹಿತಿ ಮೇರೆಗೆ ಪೊಲೀಸರು ದಾಳಿ ನಡೆಸಿದ್ದು, ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತರಿಂದ 3,75,400 ಮೌಲ್ಯದ ಖೋಟಾ ನೋಟುಗಳು ಹಾಗೂ ಒಂದು ಬೈಕ್ ಸೀಜ್ ಮಾಡಲಾಗಿದೆ.
ತನಿಖೆ ವೇಳೆ ಹರಿಹರ, ಹೊಸಪೇಟೆ, ಮೈಸೂರು ಸೇರಿದಂತೆ 3 ಕಡೆ ನಡೆದ ಪ್ರಕರಣಗಳಲ್ಲಿ ಕುಬೇರಪ್ಪ ಭಾಗಿಯಾಗಿದ್ದನು ಎಂಬ ಮಾಹಿತಿ ಪೊಲೀಸರಿಗೆ ತಿಳಿದು ಬಂದಿದೆ. ಈ ಸಂಬಂಧ ಬಸವಾಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದ್ದು, ಇನ್ನೂ ಈ ಕಾರ್ಯಾಚರಣೆಯಲ್ಲಿ ಭಾಗಿಯಾದ ಪೊಲೀಸ್ ಸಿಬ್ಬಂದಿಗೆ ಎಸ್ಪಿ ಉಮಾ ಪ್ರಶಾಂತ್ ಪ್ರಶಂಸೆ ವ್ಯಕ್ತಪಡಿಸಿದ್ದಾರೆ.