ಸೋಮವಾರಪೇಟೆ: ಇಂದು ಬೆಳ್ಳಂಬೆಳ್ಳಗೆ ಘೋರ ದುರಂತವೊಂದು ನಡೆದಿದ್ದು, ಭಾರಿ ಗಾಳಿ ಮಳೆಗೆ ಮನೆಯ ಗೋಡೆ ಕುಸಿದು ಕಾರ್ಮಿಕ ಮಹಿಳೆ ಮೃತಪಟ್ಟಿರುವ ಘಟನೆ ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲ್ಲೂಕಿನ ಹಾನಗಲ್ಲು ಗ್ರಾಮದಲ್ಲಿ ನಡೆದಿದೆ.
ಕಲಬುರಗಿ ಜಿಲ್ಲೆಯ ಅಫ್ಜಲ್ ಪುರದ ಸುಷ್ಮಾ(37) ಮೃತ ಮಹಿಳೆಯಾಗಿದ್ದು,ಇಂದು ಬೆಳಿಗ್ಗೆ 5.30ಕ್ಕೆ ಭಾರಿ ಗಾಳಿ ಮಳೆಗೆ ಮಣ್ಣಿನ ಗೋಡೆ ಕುಸಿದು ಮಹಿಳೆಯ ತಲೆ ಭಾಗಕ್ಕೆ ಬಿದ್ದ ಹಿನ್ನೆಲೆ ಸ್ಥಳದಲ್ಲೇ ಸಾವನ್ನಪಿದ್ದಾರೆ. ಗೋಡೆ ಬೀಳುವ ಸಂಧರ್ಭ ಮನೆಯಲ್ಲಿ ಮೂರು ಮಕ್ಕಳು ಹಾಗೂ ಸಹೋದರ ಇದ್ದು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಸಹೋದರ ಸಣ್ಣಪುಟ್ಟಗಾಯಗಳಿಂದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಇನ್ನು ಈ ಕುಟುಂಬ ಕಳೆದ ಎರಡು ವರ್ಷದ ಹಿಂದೆ ಸೋಮವಾರಪೇಟೆಗೆ ಆಗಮಿಸಿ ಸಣ್ಣ ಪುಟ್ಟ ಕೆಲಸಗಳಲ್ಲಿ ತೊಡಗಿಕೊಂಡಿದ್ದರು. ಇನ್ನು ವಿಚಾರ ತಿಳಿಯುತಿದಂತೆ ಘಟನಾ ಸ್ಥಳಕ್ಕೆ ಕಂದಾಯ ಮತ್ತು ಪೊಲೀಸ್ ಇಲಾಖೆ ಅಧಿಕಾರಿಗಳ ಭೇಟಿ, ಪರಿಶೀಲನೆ ನಡೆಸಿದ್ದು ಮುಂದಿನ ಕ್ರಮ ಕೈಗೊಂಡಿದ್ದಾರೆ