ಶರಣಬಸಪ್ಪ ಅಪ್ಪ ಆರೋಗ್ಯದಲ್ಲಿ ಏರುಪೇರು: ಆಸ್ಪತ್ರೆಗೆ ದಾಖಲು

0
Spread the love

ಕಲಬುರಗಿ: ಕಲ್ಯಾಣ ಕರ್ನಾಟಕದಲ್ಲಿ ಶೈಕ್ಷಣಿಕ ಕ್ರಾಂತಿಗೆ ಹೆಸರಾಗಿರುವ ಶ್ರದ್ಧೇಯ ದಾರ್ಶನಿಕ ಮತ್ತು ಶಿಕ್ಷಣ ತಜ್ಞ ಡಾ. ಶರಣಬಸವಪ್ಪ ಅಪ್ಪ ಅವರ ಆರೋಗ್ಯದಲ್ಲಿ ಏರುಪೇರು ಉಂಟಾಗಿದ್ದು, ಅವರನ್ನು ಕಲಬುರಗಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

Advertisement

ಶರಣಬಸವೇಶ್ವರ ಸಂಸ್ಥಾನದ ಎಂಟನೇ ಪೀಠಾಧಿಪತಿಯಾಗಿ ಸೇವೆ ಸಲ್ಲಿಸುತ್ತಿರುವ 90 ವರ್ಷದ ಶರಣಬಸವಪ್ಪ ಅಪ್ಪ ಅವರು ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದು, ಪ್ರಸ್ತುತ ಖಾಸಗಿ ಆಸ್ಪತ್ರೆಯ ಐಸಿಯು ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಶರಣಬಸವೇಶ್ವರ ಸಂಸ್ಥಾನದ ಮೂಲಕ ದಾಸೋಹತತ್ತ್ವ ಮತ್ತು ಶಿಕ್ಷಣ ಕ್ಷೇತ್ರದಲ್ಲಿ ಅಪೂರ್ವ ಸೇವೆ ಸಲ್ಲಿಸಿರುವ ಶರಣಬಸವಪ್ಪ ಅಪ್ಪ ಅವರು ಲಕ್ಷಾಂತರ ವಿದ್ಯಾರ್ಥಿಗಳಿಗೆ ಶಿಕ್ಷಣದ ಬೆಳಕು ಹರಡಿದ ಮಹತ್ವದ ದಾರ್ಶನಿಕ ವ್ಯಕ್ತಿಯಾಗಿದ್ದಾರೆ. ಅವರ ಆರೋಗ್ಯ ಸುಧಾರಣೆಗೆ ಭಕ್ತರು ಹಾಗೂ ಸಾರ್ವಜನಿಕರು ಪ್ರಾರ್ಥಿಸುತ್ತಿದ್ದಾರೆ.


Spread the love

LEAVE A REPLY

Please enter your comment!
Please enter your name here