ಮೈಸೂರು: ಸರ್ವೇ ಮಾಡಿಸಿದ್ರೆ ಯಾರು ಎಷ್ಟು ಕೆಲಸ ಮಾಡಿದ್ದಾರೆ ಅನ್ನೋದು ಗೊತ್ತಾಗುತ್ತೆ ಎಂದು ವಿಧಾನಪರಿಷತ್ ಸದಸ್ಯ ಯತೀಂದ್ರ ಸಿದ್ದರಾಮಯ್ಯ ಹೇಳಿಕೆಗೆ ಸಂಸದ ಯದುವೀರ್ ಒಡೆಯರ್ ತಿರುಗೇಟು ನೀಡಿದ್ದಾರೆ. ಮೈಸೂರಿನಲ್ಲಿ ಮಾತನಾಡಿದ ಅವರು,
ನಾಲ್ವಡಿ ಕೃಷ್ಣರಾಜ ಒಡೆಯರ್ ಮಾಡಿರುವ ಕೆಲಸ ಜನರ ಹಿತಕ್ಕಾಗಿ, ಅದು ಹೋಲಿಕೆಗಾಗಿ ಮಾಡಿರುವ ಕೆಲಸವಲ್ಲ. ನಾನು ನಮ್ಮ ವಂಶದ ಬಗ್ಗೆ ಮಾತನಾಡುವುದು ಸರಿಯಲ್ಲ. ಫೀಲ್ಡಿಗಿಳಿದು ಜನರನ್ನು ಕೇಳಿದರೆ ಅವರೇ ಉತ್ತರ ಕೊಡುತ್ತಾರೆ.
ನಮ್ಮ ಪೂರ್ವಿಕರು ಭವಿಷ್ಯದ ದೃಷ್ಟಿ ಇಟ್ಟುಕೊಂಡು ಕೆಲಸ ಮಾಡಿದ್ದಾರೆ. ಈಗ ಕಾಂಗ್ರೆಸ್ನವರು ಜನರ ದಿಕ್ಕು ತಪ್ಪಿಸಲು ಈ ರೀತಿ ಮಾಡುತ್ತಿದ್ದಾರೆ ಅನಿಸುತ್ತಿದೆ.
ಕಾಂಗ್ರೆಸ್ ನಾಯಕರು ಜನರ ಬಳಿ ಈ ವಿಚಾರ ಕೇಳಿದರೆ ಜನರೇ ಉತ್ತರ ನೀಡುತ್ತಾರೆ ಎಂದರು. ಮೈಸೂರಿಗೆ ನಾಲ್ವಡಿಗಿಂತಲೂ ಸಿದ್ದರಾಮಯ್ಯ ಕೊಡುಗೆ ಜಾಸ್ತಿ ಎಂಬ ಎಂಎಲ್‌ಸಿ ಯತೀಂದ್ರ ಸಿದ್ದರಾಮಯ್ಯ ಹೇಳಿಕೆ ವ್ಯಾಪಕ ಟೀಕೆಗೆ ಗುರಿಯಾಗಿದೆ.