ಬೆಂಗಳೂರು:- ಕರ್ನಾಟಕದಲ್ಲಿ ಧಾರಕಾರ ಮಳೆ ಮುಂದುವರಿದಿದ್ದು, ಭಾರತೀಯ ಹವಾಮಾನ ಇಲಾಖೆಯು ಮೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಅದರಂತೆ ಉತ್ತರ ಕನ್ನಡ, ಶಿವಮೊಗ್ಗ ಹಾಗೂ ಚಿಕ್ಕಮಗಳೂರು ಜಿಲ್ಲೆಗೆ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ. ಉಳಿದ ಎಲ್ಲಾ ಜಿಲ್ಲೆಗಳಿಗೂ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಗಾಳಿಯ ವೇಗ ಗಂಟೆಗೆ 40-50 ಕಿ.ಮೀ ವೇಗದಲ್ಲಿ ಬೀಸಲಿದ್ದು, ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ.
ಕಾಫಿನಾಡ ಮಲೆನಾಡಲ್ಲಿ ರಣ ಗಾಳಿ-ಮಳೆ ಮುಂದುವರಿದಿದ್ದು, ನಿರಂತರ ಧಾರಾಕಾರ ಮಳೆಗೆ ಶೃಂಗೇರಿ ಜನಜೀವನ ಅಸ್ತವ್ಯಸ್ತಗೊಂಡಿದೆ. ಶೃಂಗೇರಿ ಜನಸಾಮಾನ್ಯರ ಜೊತೆ ಶಾರದಾಂಬೆ ಭಕ್ತರು ಕೂಡ ಕಂಗಾಲಾಗಿದ್ದಾರೆ. ತುಂಗಾ ನದಿಯ ಅಬ್ಬರಕ್ಕೆ ಪ್ರವಾಸಿಗರ ಕಾರುಗಳು ಮುಳುಗಡೆಯಾಗಿದೆ. ಗಾಂಧಿ ಮೈದಾನದಲ್ಲಿ ನಿಂತಿದ್ದ ಪ್ರವಾಸಿ ಕಾರುಗಳು ಜಲಾವೃತಗೊಂಡಿದೆ. ಒಟ್ಟಾರೆ ರಾಜ್ಯದಲ್ಲಿ ಮಳೆಯಬ್ಬರ ಹೆಚ್ಚಿದ್ದು, ನಾನಾ ಅವಾಂತರಗಳು ಸೃಷ್ಟಿಯಾಗಿವೆ.