ಮೈಸೂರು:– ಮೈಸೂರು ಜಿಲ್ಲೆಯ ತಿ.ನರಸೀಪುರ ಪಟ್ಟಣದ ಲಿಂಕ್ ರಸ್ತೆಯಲ್ಲಿರುವ ಬಟ್ಟೆ ಅಂಗಡಿಯೊಂದರಲ್ಲಿ ಅಗ್ನಿ ಅವಘಡ ಸಂಭವಿಸಿ ಅಪಾರ ಹಾನಿಯಾಗಿರುವ ಘಟನೆ ಜರುಗಿದೆ.
Advertisement
ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಹೊತ್ತಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಕೂಡಲೇ ಮಾಹಿತಿ ಆಧರಿಸಿ ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ದಳ ಸಿಬ್ಬಂದಿಗಳು ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಘಟನೆಯಲ್ಲಿ ಲಕ್ಷಾಂತರ ರೂಪಾಯಿ ಮೌಲ್ಯದ ಬಟ್ಟೆ ಸುಟ್ಟುಕರಕಲಾಗಿದೆ.
ತಿ.ನರಸೀಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ಜರುಗಿದೆ.


