ಗಾಜಿಪುರ:- ತಂದೆ-ತಾಯಿ ಹಾಗೂ ಸಹೋದರಿಯನ್ನು ಕೊಡಲಿಯಿಂದ ಕಡಿದು ಕೊಲೆ ಮಾಡಿ ಬಳಿಕ ವ್ಯಕ್ತಿ ಎಸ್ಕೇಪ್ ಆಗಿರುವ ಘಟನೆ ಉತ್ತರ ಪ್ರದೇಶದ ಗಾಜಿಪುರದಲ್ಲಿ ನಡೆದಿದೆ.
Advertisement
ಘಟನೆ ಬಳಿಕ ಶವಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ. ಹಾಗೂ ಗ್ರಾಮದಲ್ಲಿ ಶಾಂತಿ ಕಾಪಾಡಲು ದೊಡ್ಡ ಪೊಲೀಸ್ ಪಡೆ ನಿಯೋಜನೆ ಮಾಡಲಾಗಿದೆ. ಕುಟುಂಬದೊಳಗೆ ದೀರ್ಘಕಾಲದ ಜಮೀನು ವಿವಾದವಿದ್ದು, ಇದು ಕೊಲೆಗಳಿಗೆ ಕಾರಣವಾಗಿರಬಹುದು ಎಂದು ಅಧಿಕಾರಿಗಳು ಶಂಕಿಸಿದ್ದಾರೆ.
ಇನ್ನೂ ದಾಳಿಯ ನಂತರ ಆರೋಪಿ ಸ್ಥಳದಿಂದ ಪರಾರಿಯಾಗಿದ್ದು, ಆತನ ಪತ್ತೆಗಾಗಿ ಪೊಲೀಸರು ಹುಡುಕಾಟ ನಡೆಸಿದ್ದಾರೆ.