ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಕೇಸ್ನಲ್ಲಿ ಮೃತನ ಕುಟುಂಬಕ್ಕೆ ನ್ಯಾಯ ಸಿಗಬೇಕು ಎಂದ ನಟಿ ರಮ್ಯಾ ವಿರುದ್ಧ ನಟ ದರ್ಶನ್ ಫ್ಯಾನ್ಸ್ ಸಿಡಿದೆದಿದ್ದಾರೆ. ಸೋಶಿಯಲ್ ಮೀಡಿಯಾದಲ್ಲಿ ದರ್ಶನ್ ಫ್ಯಾನ್ಸ್ ಆ್ಯಂಡ್ ನಟಿ ರಮ್ಯಾ ವಾರ್ ಜೋರಾಗಿದೆ.
ಇದೀಗ ರಮ್ಯಾಗೆ ಒಳ್ಳೆ ಹುಡ್ಗ ಪ್ರಥಮ್ ಸಾಥ್ ನೀಡಲು ಮುಂದಾಗಿದ್ದಾರೆ. ಎಕ್ಸ್ ಖಾತೆಯಲ್ಲಿ ಟ್ವೀಟ್ ಹಂಚಿಕೊಂಡಿರುವ ಅವರು, ನಾನು ರಮ್ಯಾ ಮೇಡಂ ಘನತೆಗೆ ಬೆಂಬಲ ನೀಡುತ್ತೇನೆ. ಎಲ್ಲರೂ ನಟಿ ರಮ್ಯಾ ಪರ ನಿಲ್ಲೋಣ. ಈಗಲೂ ನಾವು ರಮ್ಯಾ ಅವರ ಆತ್ಮಗೌರವದ ಪರ ನಿಲ್ಲದೇ ಹೋದರೆ ನಾವು ಕಲಾವಿದರಾಗೋಕೆ ನಾಚಿಕೆಯಾಗಬೇಕು.
ಕನ್ನಡ ಚಿತ್ರರಂಗವನ್ನ ಭಯದಿಂದ ಮುಕ್ತಗೊಳಿಸೋಣ. ಇಷ್ಟೆಲ್ಲಾ ಆದರೂ ಜಾಣಕಿವುಡರಾಗಿರುವ ಪುಣ್ಯಾತ್ಮ ಕಲಾವಿದರಿಗೆ ದೇವರು ನೂರು ಕಾಲ ಬಾಳುವ ಆಯಸ್ಸು ನೀಡಲೆಂದು ಪ್ರಾರ್ಥಿಸುತ್ತೇನೆ ಎಂದಿದ್ದಾರೆ. ಡಿ–ಬಾಸ್ ಅಭಿಮಾನಿಗಳು ನಿರಂತರವಾಗಿ ರಮ್ಯಾಗೆ ಸೋಷಿಯಲ್ ಮೀಡಿಯಾ ಮೂಲಕ ಅಶ್ಲೀಲ ಮೆಸೇಜ್ ಕಳುಹಿಸುತ್ತಿದ್ದಾರೆ. ಇದರ ಬೆನ್ನಲ್ಲೇ ನಟಿ ಕೂಡ ದರ್ಶನ್ ಫ್ಯಾನ್ಸ್ ವಿರುದ್ಧ ಗರಂ ಆಗಿದ್ದಾರೆ.


