ಕರ್ನಾಟಕದಲ್ಲಿ ರಸಗೊಬ್ಬರದ ಕೊರತೆಯಿಲ್ಲ, ಸರಿಯಾದ ಕ್ರಮದಲ್ಲಿ ಬಳಸಬೇಕು: ಜೋಶಿ

0
Spread the love

ನವದೆಹಲಿ:- ಕರ್ನಾಟಕದಲ್ಲಿ ರಸಗೊಬ್ಬರದ ಕೊರತೆಯಿಲ್ಲ, ಸರಿಯಾದ ಕ್ರಮದಲ್ಲಿ ಬಳಸಬೇಕು ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೇಳಿದ್ದಾರೆ.

Advertisement

ಈ ಸಂಬಂಧ ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮಾಡಿರುವ ಜೋಶಿ, ಕೇಂದ್ರ ಸರ್ಕಾರ ರಸಗೊಬ್ಬರ ಕಳುಹಿಸಿಲ್ಲ ಎಂಬ ರಾಜ್ಯ ಸರ್ಕಾರದ ಟೀಕೆಯ ಬೆನ್ನಲ್ಲೇ ಕರ್ನಾಟಕದಲ್ಲಿ ರಸಗೊಬ್ಬರದ ಅಭಾವವಿಲ್ಲ ಎಂದರು. ಕೇಂದ್ರ ಸರ್ಕಾರದಿಂದ ಸರಬರಾಜು ಆಗಿರುವ ರಸಗೊಬ್ಬರಗಳಲ್ಲಿ 1.65 ಲಕ್ಷ ಮೆಟ್ರಿಕ್ ಟನ್ ರಸಗೊಬ್ಬರವನ್ನು ಸಂಗ್ರಹಣೆ ಮಾಡಲಾಗಿದೆ. ರೈತರಿಗೆ ಬೇಕಾದ ರಸಗೊಬ್ಬರಗಳನ್ನು ರಾಜ್ಯ ಸರ್ಕಾರಕ್ಕೆ ಈಗಾಗಲೇ ನೀಡಲಾಗಿದ್ದು, ಸರಿಯಾದ ಕ್ರಮದಲ್ಲಿ ಬಳಸಬೇಕಿದೆ ಎಂದು ತಿಳಿಸಿದ್ದಾರೆ.

ರಸಗೊಬ್ಬರದ ಬೇಡಿಕೆ ಹೆಚ್ಚಿದ್ದು, ಅಗತ್ಯ ರಸಗೊಬ್ಬರಗಳನ್ನು ಕರ್ನಾಟಕಕ್ಕೆ ಸರಬರಾಜು ಮಾಡುವಂತೆ ಕೋರಿ ಇಂದು ರಾಜ್ಯದ ಎಲ್ಲಾ ಬಿಜೆಪಿ ಸಂಸದರು ಕೇಂದ್ರ ರಾಸಾಯನಿಕ ಹಾಗೂ ರಸಗೊಬ್ಬರಗಳ ಸಚಿವರಾದ ಜೆಪಿ ನಡ್ಡಾ ಅವರನ್ನು ಭೇಟಿಯಾಗಿ ಮನವಿಯನ್ನು ಸಲ್ಲಿಸಲಾಗಿದೆ ಎಂದು ಹೇಳಿದರು. ನರೇಂದ್ರ ಮೋದಿ ನೇತೃತ್ವದ ಸರ್ಕಾರ ದೇಶದ ರೈತರ ಬೆನ್ನೆಲುಬಾಗಿ ನಿಂತಿದ್ದು, ಎಂತಹದ್ದೇ ಸಮಯದಲ್ಲೂ ರೈತರ ಹಿತ ಕಾಪಾಡುವುದು ನಮ್ಮ ಸರ್ಕಾರದ ಧ್ಯೇಯವಾಗಿದೆ. ಸಂಸದರ ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸಿರುವ ಕೇಂದ್ರ ರಾಸಾಯನಿಕ ಹಾಗೂ ರಸಗೊಬ್ಬರಗಳ ಸಚಿವರಾದ ಜೆಪಿ ನಡ್ಡಾ ಅವರಿಗೆ ಅನಂತ ಧನ್ಯವಾದಗಳು ಎಂದಿದ್ದಾರೆ.


Spread the love

LEAVE A REPLY

Please enter your comment!
Please enter your name here