ವಿಜಯಸಾಕ್ಷಿ ಸುದ್ದಿ, ಗದಗ
Advertisement
ಗದಗ ಜಿಲ್ಲೆಯಲ್ಲಿ ಇಂದು 28 ಜನರಿಗೆ ಸೋಂಕು ತಗುಲಿದೆ. ಇಂದಿನ ವರದಿಯಲ್ಲಿ ಕೋವಿಡ್ ನಿಂದ ಯಾವುದೇ ಸಾವು ಆಗದಿರವುದು ಜಿಲ್ಲೆಯ ಮಟ್ಟಿಗೆ ನೆಮ್ಮದಿ ಮೂಡಿಸಿದೆ.
ಇಂದು 28 ಜನರಿಗೆ ಸೋಂಕು ತಗುಲುವ ಮೂಲಕ ಜಿಲ್ಲೆಯಲ್ಲಿ ಇದುವರೆಗೂ ಸೋಂಕಿತರ ಸಂಖ್ಯೆ 25425 ಏರಿಕೆ ಕಂಡಿದೆ.
ಗದಗ ನಗರ ಹಾಗೂ ತಾಲೂಕಿನಲ್ಲಿ -12, ಮುಂಡರಗಿ-04, ನರಗುಂದ-02, ರೋಣ-03, ಶಿರಹಟ್ಟಿ-05, ಹೊರಜಿಲ್ಲೆಯ-02 ಸೇರಿದಂತೆ 28 ಪ್ರಕರಣಗಳು ದೃಢಪಟ್ಟಿವೆ.
ಇಂದು 113 ಜನರು ಸೋಂಕಿನಿಂದ ಗುಣಮುಖರಾಗಿದ್ದು, ಇದುವರೆಗೂ 24494 ಜನರು ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾದಂತಾಗಿದೆ.
ಇಂದು ಜಿಲ್ಲೆಯಲ್ಲಿ 643 ಜನ ಸೋಂಕಿತರು ಸಕ್ರಿಯವಾಗಿದ್ದು ಅವರೆಲ್ಲರೂ ಚಿಕಿತ್ಸೆ ಪಡೆಯುತ್ತಿದ್ದಾರೆ.
ಇನ್ನೂ 85 ಜನರ ವರದಿ ಬರಲು ಬಾಕಿ ಇದೆ ಎಂದು ಜಿಲ್ಲಾಧಿಕಾರಿಗಳ ಪ್ರಕಟಣೆ ತಿಳಿಸಿದೆ.