ಚಾಮರಾಜನಗರ:- ಬೈಕ್ ಗೆ ಕೆಎಸ್ ಆರ್ ಟಿಸಿ ಬಸ್ ಡಿಕ್ಕಿ ಹೊಡೆದು ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಹನೂರು ತಾಲ್ಲೂಕಿನ ಕೌದಳ್ಳಿ ಗ್ರಾಮದಲ್ಲಿ ಜರುಗಿದೆ.
Advertisement
ಜೀವನ್ (18) ಮೃತ ಯುವಕ. ಈತ ಕೌದಳ್ಳಿ ಗ್ರಾಮದ ಕ್ರಿಶ್ಚಿಯನ್ ಕಾಲೋನಿ ನಿವಾಸಿ ಎನ್ನಲಾಗಿದೆ. ಜೀವನ್ ತನ್ನ ಮನೆಗೆ ಬೈಕ್‌ನಲ್ಲಿ ತೆರಳುತ್ತಿದ್ದಾಗ ಮಹದೇಶ್ವರ ಬೆಟ್ಟದ ದಿಕ್ಕಿನಿಂದ ಬರುವ ಬಸ್ ಡಿಕ್ಕಿಯಾಗಿದ್ದು, ಸ್ಥಳದಲ್ಲೇ ಬೈಕ್ ಸವಾರ ಮೃತಪಟ್ಟಿದ್ದಾನೆ.
ಘಟನೆ ಬಳಿಕ ಸ್ಥಳೀಯರು ಬಸ್ ತಡೆದು ಪ್ರತಿಭಟನೆ ನಡೆಸಿದರು. ಹಾಗಾಗಿ ಕೆಲಕಾಲ ರಸ್ತೆಯಲ್ಲಿ ವಾಹನ ಅಸ್ತವ್ಯಸ್ತ ಉಂಟಾಯಿತು. ಮಾಹಿತಿ ತಿಳಿಯುತ್ತಿದ್ದಂತೆಯೇ ಸ್ಥಳೀಯ ಪೋಲೀಸರು ಸ್ಥಳಕ್ಕಾಗಮಿಸಿ ಸುಗಮ ಸಂಚಾರಕ್ಕೆ ಅನುವು ಮಾಡಿ ಪ್ರಕರಣ ದಾಖಲಿಸಿಕೊಂಡು ಕ್ರಮಕೈಗೊಂಡಿದ್ದಾರೆ.