ಬೀದರ್:- ಕೃಷಿ ಅಧಿಕಾರಿ ಮನೆಯಲ್ಲಿ ಕಳ್ಳರು ಕೈಚಳಕ ತೋರಿದ್ದು, 26 ಲಕ್ಷದ ಚಿನ್ನಾಭರಣ ಕದ್ದು ಖದೀಮರು ಎಸ್ಕೇಪ್ ಆಗಿದ್ದಾರೆ.
Advertisement
ಜಿಲ್ಲೆಯ ಗುರುನಗರ ಕಾಲೋನಿಯಲ್ಲಿ ಮನೆಯಲ್ಲಿ ಯಾರೂ ಇಲ್ಲದ ವೇಳೆ ಬೀಗ ಮುರಿದು 26 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಕದ್ದು ಪರಾರಿಯಾಗಿದ್ದಾರೆ. ಔರಾದ್ ತಾಲೂಕಿನ ಕೃಷಿ ಇಲಾಖೆಯ ಅಧಿಕಾರಿಯಾಗಿದ್ದ ದೂಳಪ್ಪ ಹೊಸಳ್ಳಿ ಎಂಬುವವರ ಮನೆಯಲ್ಲಿ ಕಳ್ಳತನ ನಡೆದಿದೆ.
ಕಳವು ಮಾಡಿದ ದಿನ, ದಂಪತಿ ಶಿರಡಿ ಸಾಯಿಬಾಬಾ ದರ್ಶನಕ್ಕೆ ಹೋಗಿದ್ದರು. ಮನೆಯಲ್ಲಿ ಯಾರು ಇಲ್ಲದೇ ಇರುವುದನ್ನು ಗಮನಿಸಿದ ಖದೀಮರು, ಮನೆ ಬೀಗ ಮುರಿದು ಒಳನುಗ್ಗಿದ್ದಾರೆ. ಈ ವೇಳೆ ಮನೆಯಲ್ಲಿದ್ದ 310 ಗ್ರಾಂ ಚಿನ್ನಾಭರಣ, 2 ಲಕ್ಷ ನಗದು ಸೇರಿದಂತೆ ಒಟ್ಟು 26 ಲಕ್ಷ ರೂ.ಗೂ ಅಧಿಕ ಮೌಲ್ಯದ ವಸ್ತುಗಳನ್ನು ಕಳವು ಮಾಡಿದ್ದಾರೆ. ದಂಪತಿ ಮನೆಗೆ ಮರಳಿದಾಗ ಕಳ್ಳತನವಾಗಿರುವುದು ಬೆಳಕಿಗೆ ಬಂದಿದೆ.
ಸದ್ಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.