ವಿಜಯಸಾಕ್ಷಿ ಸುದ್ದಿ, ಬೆಂಗಳೂರು
ಅಪಘಾತದಿಂದ ನಿಧನರಾಗಿರುವ ರಾಷ್ಟ್ರಪ್ರಶಸ್ತಿ ವಿಜೇತ ನಟ ಸಂಚಾರಿ ವಿಜಯ್ ಅವರು ಸಾವಿನಲ್ಲೂ ಸಾರ್ಥಕತೆ ಮೆರೆದಿದ್ದಾರೆ. ಅವರ ಕುಟುಂಬಸ್ಥರ ಅನುಮತಿ ಮೇರೆಗೆ ಅಂಗಾಂಗ ದಾನ ಮಾಡಿದ್ದು, ಆ ಅಂಗಾಂಗಗಳನ್ನು ಬೇರೆ ವ್ಯಕ್ತಿಗಳಿಗೆ ಕಸಿ ಮಾಡುವ ಮಾಡುವ ಪ್ರಕ್ರಿಯೆಯೂ ಮುಗಿದಿದೆ.
ನಟ ವಿಜಯ್ ಅವರು ರಂಗಭೂಮಿ, ಸಿನೆಮಾ ರಂಗಗಳೆರಡರಲ್ಲೂ ತಮ್ಮ ಮನೋಜ್ಞ ಅಭಿನಯದ ಮೂಲಕ ಗಮನ ಸೆಳೆದಿದ್ದರು. ಅವರ ಅಕಾಲಿಕ ನಿಧನದಿಂದ ಕನ್ನಡ ಚಿತ್ರರಂಗಕ್ಕೆ ತುಂಬಲಾರದ ನಷ್ಟವುಂಟಾಗಿದೆ ಎಂದು ಯಡಿಯೂರಪ್ಪ ಅವರು ಹೇಳಿದ್ದಾರೆ.
ಪ್ರತಿಭಾವಂತ, ರಾಷ್ಟ್ರಪ್ರಶಸ್ತಿ ಪುರಸ್ಕೃತ ನಟ ಸಂಚಾರಿ ವಿಜಯ್ ಅಗಲಿಕೆಗೆ ಸಿಎಂ ಬಿ.ಎಸ್.ಯಡಿಯೂರಪ್ಪ ಅವರು ಭಾವಪೂರ್ವ ಶ್ರದ್ಧಾಂಜಲಿ ತಿಳಿಸಿದ್ದಾರೆ. ಅವರ ಅಂಗಾಂಗ ದಾನ ಮಾಡಿ ಸಾರ್ಥಕತೆ ಮೆರೆದಿರುವ ಕುಟುಂಬದವರಿಗೆ ಕೃತಜ್ಞತೆಗಳ ಜೊತೆಗೆ ಸಂತಾಪ ಸೂಚಿಸಿದ್ದಾರೆ.
ಸಂಚಾರಿ ವಿಜಯ್ ಅವರ ಅಂತ್ಯಕ್ರಿಯೆಯನ್ನು ಸಕಲ ಸರ್ಕಾರಿ ಪೊಲೀಸ್ ಗೌರವಗಳೊಂದಿಗೆ ನಡೆಸಲಾಗುವುದು ಎಂದು ಅವರು ತಿಳಿಸಿದ್ದಾರೆ.