Home Karnataka News ಕರ್ನಾಟಕದಲ್ಲಿ ಮುಂಗಾರು ದುರ್ಬಲ: ಅಲ್ಲಲ್ಲಿ ಸಾಧಾರಣ ಮಳೆ ಸಾಧ್ಯತೆ!

ಕರ್ನಾಟಕದಲ್ಲಿ ಮುಂಗಾರು ದುರ್ಬಲ: ಅಲ್ಲಲ್ಲಿ ಸಾಧಾರಣ ಮಳೆ ಸಾಧ್ಯತೆ!

0
ಕರ್ನಾಟಕದಲ್ಲಿ ಮುಂಗಾರು ದುರ್ಬಲ: ಅಲ್ಲಲ್ಲಿ ಸಾಧಾರಣ ಮಳೆ ಸಾಧ್ಯತೆ!
Spread the love

ಬೆಂಗಳೂರು:- ಇಂದಿನಿಂದ ಕರ್ನಾಟಕದಲ್ಲಿ ಮುಂಗಾರು ದುರ್ಬಲಗೊಂಡಿದ್ದು, ಅಲ್ಲಲ್ಲಿ ಸಾಧಾರಣ ಮಳೆ ಆಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ಕೊಟ್ಟಿದೆ.

ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಸ್ವಲ್ಪ ಹೆಚ್ಚಿನ ಮಳೆಯಾಗಲಿದೆ. ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿಯಲ್ಲಿ ಸಾಧಾರಣ ಮಳೆಯಾಗಲಿದೆ. ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರದಲ್ಲಿ ಮಳೆಯಾಗಲಿದೆ.

ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿರಲಿದೆ. ಎಚ್​​ಎಎಲ್​​ನಲ್ಲಿ 27.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 26.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.3 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್​​ನಲ್ಲಿ 27.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 27.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.


Spread the love

LEAVE A REPLY

Please enter your comment!
Please enter your name here