ಬೆಂಗಳೂರು: ಒಳಮೀಸಲಾತಿ ಜಾರಿಗೆ ವಿಳಂಬ ನೀತಿ ಅನುಸರಿಸುತ್ತಿರುವ ರಾಜ್ಯ ಸರ್ಕಾರದ ವಿರುದ್ಧ ಮಾದಿಗ ಸಮುದಾಯದ ಮುಖಂಡರು ರಾಜ್ಯದಾದ್ಯಂತ ಪ್ರತಿಭಟನೆಗೆ ಕರೆ ಕೊಟ್ಟಿದ್ದಾರೆ. ಅದರಂತೆ ಇಂದು ಬೆಂಗಳೂರಿನ ಫ್ರೀಡಂ ಪಾರ್ಕಿನಲ್ಲಿ ಮಾಜಿ ಕೇಂದ್ರ ಸಚಿವರಾದ ಎ. ನಾರಾಯಣಸ್ವಾಮಿ ಅವರ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ ಜರುಗಿದೆ.
Advertisement
ಒಳಮೀಸಲಾತಿ ಜಾರಿಗೊಳಿಸುವಂತೆ ಸುಪ್ರೀಂ ಕೋರ್ಟ್ ತೀರ್ಪು ನೀಡಿ ವರ್ಷವೇ ಆಗುತ್ತಿದ್ದರೂ ರಾಜ್ಯ ಸರ್ಕಾರ ವಿನಾಕಾರಣ ಒಳಮೀಸಲಾತಿ ಜಾರಿಗೆ ವಿಳಂಬ ಮಾಡುತ್ತಿದೆ. ಹೀಗಾಗಿ ಇದು ಸರಿಯಾದ ಬೆಳವಣಿಗೆ ಅಲ್ಲ. ಅಲ್ಲದೇ ಶೀಘ್ರವೇ ಒಳಮೀಸಲಾತಿ ಜಾರಿಗೊಳಿಸುವಂತೆ ಪ್ರತಿಭಟನಾಕಾರರು ಆಗ್ರಹ ಮಾಡಿದ್ದಾರೆ. ಹಾಗೂ ಕೂಡಲೇ ಒಳಮೀಸಲಾತಿ ಜಾರಿ ಮಾಡಬೇಕು. ಇಲ್ಲದಿದ್ದರೆ ವಿಧಾನಸೌಧ ಮುತ್ತಿಗೆ ಹಾಕುವ ಎಚ್ಚರಿಕೆಯನ್ನು ಈ ವೇಳೆ ಹೋರಾಟಗಾರರು ಕೊಟ್ಟಿದ್ದಾರೆ.