ಬೆಂಗಳೂರು:- ಮೋಹಕತಾರೆ ನಟಿ ರಮ್ಯಾಗೆ ಅಶ್ಲೀಲ ಪದಗಳಿಂದ ನಿಂದಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸೈಬರ್ ಕ್ರೈಮ್ ಪೊಲೀಸರು, ಮೂವರನ್ನು ಅರೆಸ್ಟ್ ಮಾಡಿದ್ದಾರೆ.
Advertisement
ಮೂವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿರುವ ಪೊಲೀಸರು ಸೋಷಿಯಲ್ ಮೀಡಿಯಾ ಐಡಿಗಳ ಮೂಲಕ ಮೂವರನ್ನು ಪತ್ತೆ ಮಾಡಿದ್ದಾರೆ.
ನಟಿ ರಮ್ಯಾ ಅವರಿಗೆ ಇತ್ತೀಚೆಗೆ ಸಾಮಾಜಿಕ ಜಾಲತಾಣದಲ್ಲಿ ಅಶ್ಲೀಲ ಸಂದೇಶಗಳು ಬಂದಿದ್ದವು. ಇವರೆಲ್ಲ ದರ್ಶನ್ ಅಭಿಮಾನಿಗಳು ಎಂದು ಹೇಳಲಾಗಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ರಮ್ಯಾ ಸೈಬರ್ ಪೊಲೀಸ್ ಠಾಣೆಗೆ ತೆರಳಿ ದೂರು ದಾಖಲು ಮಾಡಿದ್ದರು. ಈ ಪ್ರಕರಣದಲ್ಲಿ ತ್ವರಿತ ಕ್ರಮ ಕೈಗೊಂಡಿರೋ ಪೊಲೀಸ್ ಅಧಿಕಾರಿಗಳು ಮೂವರನ್ನು ವಶಕ್ಕೆ ಪಡೆದಿದ್ದಾರೆ. ಇದರಿಂದ ಉಳಿದವರಿಗೆ ಭಯ ಶುರುವಾಗಿದೆ.