ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಕುಲ್ಗಾಮ್ ಜಿಲ್ಲೆಯಲ್ಲಿ ಭದ್ರತಾ ಪಡೆಗಳು ನಡೆಸುತ್ತಿರುವ ʻಆಪರೇಷನ್ ಅಖಾಲ್ʼ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಯಲ್ಲಿ ಓರ್ವ ಉಗ್ರನನ್ನು ಹತ್ಯೆಗೊಳಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
Advertisement
ದಕ್ಷಿಣ ಕಾಶ್ಮೀರದ ಕುಲ್ಗಾಮ್ ಜಿಲ್ಲೆಯ ದಟ್ಟ ಅರಣ್ಯ ಪ್ರದೇಶದಲ್ಲಿ ಉಗ್ರರ ಚಟುವಟಿಕೆಗಳ ಬಗ್ಗೆ ಖಚಿತ ಗುಪ್ತಚರ ಮಾಹಿತಿ ಪಡೆದ ಭಾರತೀಯ ಸೇನೆಯ ಚಿನಾರ್ ಕಾರ್ಪ್ಸ್, ʻಆಪರೇಷನ್ ಅಖಾಲ್ʼ ಎಂಬ ಹೆಸರಿನಲ್ಲಿ ಕಾರ್ಯಾಚರಣೆ ಆರಂಭಿಸಿತು.
ಅರಣ್ಯ ಪ್ರದೇಶವನ್ನು ಸುತ್ತುವರಿದು ಶೋಧ ಕಾರ್ಯಚರಣೆಯಲ್ಲಿ ತೊಡಗಿದ ಭದ್ರತಾ ಪಡೆಗಳು, ಎನ್‌ಕೌಂಟರ್ ವೇಳೆ ಒಬ್ಬ ಉಗ್ರನನ್ನು ಹತ್ಯೆಗೊಳಿಸಿದ್ದಾಗಿ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಈ ಘಟನೆಗೆ ಸಂಬಂಧಿಸಿದಂತೆ ಹೆಚ್ಚಿನ ಮಾಹಿತಿ ನಿರೀಕ್ಷೆಯಲ್ಲಿದ್ದು, ಪ್ರದೇಶದಲ್ಲಿ ಶೋಧ ಕಾರ್ಯಾಚರಣೆ ಮುಂದುವರಿಯುತ್ತಿದೆ.